ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಕಾಗಿದೆ ವಿಶೇಷ ಪ್ಯಾಕೇಜ್

Last Updated 13 ಮೇ 2021, 19:31 IST
ಅಕ್ಷರ ಗಾತ್ರ

ಕೋವಿಡ್ –19 ಎರಡನೇ ಅಲೆ ತಡೆಯಲು ಸರ್ಕಾರ ಘೋಷಿಸಿರುವ ಲಾಕ್‌ಡೌನ್‌ನಿಂದಾಗಿ ತೊಂದರೆ ಅನುಭವಿಸುತ್ತಿರುವ ದಿನಗೂಲಿ ಕಾರ್ಮಿಕರ ಕಷ್ಟಗಳಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕಾಗಿದೆ. ಇಂತಹ ಕಠಿಣ ಲಾಕ್‌ಡೌನ್ ಸಮಯದಲ್ಲಿ ದಿನಗೂಲಿ ಕಾರ್ಮಿಕರು ಕೆಲಸವಿಲ್ಲದೆ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನೂ (ನರೇಗಾ) ಲಾಕ್‌ಡೌನ್ ಕಾರಣದಿಂದ ಸ್ಥಗಿತಗೊಳಿಸಿರುವುದು ಖಂಡನೀಯ.

ಲಾಕ್‌ಡೌನ್‌ನಂತಹ ಕಠಿಣ ಸಮಯದಲ್ಲಿ ಉದ್ಯೋಗ ಖಾತರಿ ಯೋಜನೆಯು ಬಡಜನರ ನೆರವಿಗೆ ಬರುತ್ತದೆ. ಆದ್ದರಿಂದ ಸರ್ಕಾರವು ಈ ಯೋಜನೆಯನ್ನು ಕೂಡಲೇ ಪುನರಾರಂಭಿಸಬೇಕು. ಇಲ್ಲವಾದಲ್ಲಿ ದಿನಗೂಲಿ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ, ಪ್ರತೀ ಕೂಲಿ ಕಾರ್ಮಿಕರ ಖಾತೆಗೆ ಕನಿಷ್ಠ ₹ 10 ಸಾವಿರ ಹಾಕಬೇಕು.‌

–ಫಕ್ರುದ್ದೀನ್ ಚನಗ್ಲೇರ್, ಸುಲೇಪೇಟ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT