ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜೆಡಿಎಸ್ ಮುಖಂಡ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾದುದಕ್ಕೆ ಶಾಸಕರೊಬ್ಬರು ವಿರೋಧ ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಸಾಮಾನ್ಯವಾಗಿ, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡವರು ರಾಜ್ಯದ ಹಿರಿಯ ರಾಜಕಾರಣಿಗಳನ್ನು ಭೇಟಿ ಮಾಡಿ ಅವರ ಸಲಹೆ ಸೂಚನೆಗಳನ್ನು ಪಡೆದುಕೊಳ್ಳುವುದು ಒಂದು ಒಳ್ಳೆಯ ಸಂಪ್ರದಾಯವಾಗಿ ಬೆಳೆದುಬಂದಿದೆ.

ಈ ಹಿಂದೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಂತಹ ಅನೇಕ ವ್ಯಕ್ತಿಗಳು ಈ ಸಂಪ್ರದಾಯ ಪಾಲಿಸಿದ್ದಾರೆ. ದೇವೇಗೌಡರು ಮುಖ್ಯಮಂತ್ರಿಯಾಗಿ, ಪ್ರಧಾನಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಅಂತಹ ದೊಡ್ಡ ವ್ಯಕ್ತಿಯನ್ನು ಭೇಟಿ ಮಾಡಿ ಅವರ ಆಶೀರ್ವಾದ, ಸಲಹೆ ಸೂಚನೆಗಳನ್ನು ಪಡೆದುಕೊಳ್ಳುವುದು ಸುಸಂಸ್ಕೃತ ನಡೆಯಾಗಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸುವುದು ಸಣ್ಣತನದ ನಡೆ ಎನಿಸಿಕೊಳ್ಳುತ್ತದೆ.

ಕೆ.ವಿ.ವಾಸು,ಮೈಸೂರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.