ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರವಾಣಿ: ಅನಗತ್ಯ ಲಾಠಿ ಪ್ರಹಾರ ನಿಲ್ಲಿಸಿ

Last Updated 14 ಜನವರಿ 2022, 19:30 IST
ಅಕ್ಷರ ಗಾತ್ರ

ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಎರಡು ವಾರಗಳಿಂದ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯ ಕರ್ಫ್ಯೂ ಹೇರಲಾಗಿದೆ. ಈ ಸಮಯದಲ್ಲಿ ಅನಗತ್ಯ ಓಡಾಟವನ್ನು ಕಡಿಮೆ ಮಾಡಲು ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಅಗತ್ಯ ವಸ್ತುಗಳ ಖರೀದಿಗಾಗಿ ಹೊರಬರಬಹುದು ಎಂದು ಸರ್ಕಾರದ ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಆದರೂ ಪೊಲೀಸರು ಯಾವುದೇ ವಿಚಾರಣೆ ಇಲ್ಲದೆ ಅನೇಕ ಜನಸಾಮಾನ್ಯರ ಮೇಲೆ ಲಾಠಿಪ್ರಹಾರ ಮಾಡುತ್ತಿರುವುದು ಅತಿಶೋಚನೀಯ. ಪೊಲೀಸ್ ಎಂದರೆ ಜನರಲ್ಲಿ ಗೌರವಭಾವ ಇರಬೇಕೇ ವಿನಾ ಭಯವಲ್ಲ. ಈ ಕುರಿತು ಗೃಹ ಸಚಿವರು ಮತ್ತು ಪೊಲೀಸ್ ಆಯುಕ್ತರು ಸೂಕ್ತ ಕ್ರಮವನ್ನು ಕೈಗೊಳ್ಳುವುದು ಅಗತ್ಯವಾಗಿದೆ.

- ಮಲ್ಲಿಕಾರ್ಜುನ ಕೊಳ್ಳುರ,ಕಲಬುರಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT