ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌ಜನರ ಭಾವನೆ ಕೆರಳಿಸುವ ಹೇಳಿಕೆ ಬೇಡ

Last Updated 23 ಡಿಸೆಂಬರ್ 2019, 15:21 IST
ಅಕ್ಷರ ಗಾತ್ರ

ಪೌರತ್ವ (ತಿದ್ದುಪಡಿ) ಕಾಯ್ದೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆದಿವೆ. ಪ್ರತಿಭಟನೆ ನಡೆಸುವುದು ಜನರ ಸಾಂವಿಧಾನಿಕ ಹಕ್ಕು. ಆದರೆ, ಜನರ ಜೀವಕ್ಕೆ ಮತ್ತು ಸಾರ್ವಜನಿಕ ಆಸ್ತಿಗೆ ಹಾನಿಯಾಗದಂತೆ ಶಾಂತಿಯುತವಾಗಿ ಪ್ರತಿಭಟನೆ, ಮೆರವಣಿಗೆ ನಡೆಸಬೇಕು. ಒಂದು ಗುಂಪು ಪೌರತ್ವ ಕಾಯ್ದೆಯ ಪರ ಮಾತನಾಡುತ್ತಿದೆ. ಇನ್ನೊಂದು ಗುಂಪು ಇದರ ವಿರುದ್ಧ ಬೀದಿಗಿಳಿದಿದೆ. ಇವರ ನಡುವೆ ಸಾಮಾನ್ಯ ಜನರು ತೊಂದರೆ ಅನುಭವಿಸುತ್ತಿದ್ದಾರೆ.

ದೇಶದ ಹಲವೆಡೆ ಕರ್ಫ್ಯೂ ಜಾರಿಯಲ್ಲಿದೆ. ಸಾವುನೋವು ಸಂಭವಿಸಿದೆ. ಇಂಟರ್‌ನೆಟ್‌ ಸೇವೆ ಸ್ಥಗಿತಗೊಂಡಿದೆ. ಮನೆಯಿಂದ ಹೊರಗೆ ಬರಲು ಭಯಪಡುವಂತಾಗಿದೆ. ಇಂತಹ ಸಂದರ್ಭದಲ್ಲಿ ರಾಜಕೀಯ ನಾಯಕರು ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುವುದು ತರವಲ್ಲ. ನಿಜಾಂಶ ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಎಲ್ಲಾ ಮಾಹಿತಿ ಸತ್ಯದಿಂದ ಕೂಡಿರುವುದಿಲ್ಲ. ಅದನ್ನು ಒರೆಗೆ ಹಚ್ಚಿ ಸತ್ಯಾಸತ್ಯತೆಯನ್ನು ತಿಳಿಯುವುದು ಬಹಳ ಮುಖ್ಯ. ಪ್ರಚೋದನಾತ್ಮಕ ಹೇಳಿಕೆಗಳಿಗೆ ನಾಗರಿಕರು ಕಿವಿಕೊಡಬಾರದು.

ಗೌತಮಿ ಎಂ.,ಕೋಟಿಗಾನಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT