ಭಾನುವಾರ, ಆಗಸ್ಟ್ 25, 2019
26 °C

ಎಡದಂಡೆ ನಾಲೆಗೆ ನೀರು ಹರಿಸಿ

Published:
Updated:

ತುಂಗಭದ್ರಾ ಜಲಾಶಯಕ್ಕೆ ಈಗ ನೀರಿನ ಒಳಹರಿವಿನ ಪ್ರಮಾಣ ಅಧಿಕವಾಗಿದೆ. ವಾರದೊಳಗೆ ಎಡದಂಡೆ ನಾಲೆಗೆ ನೀರು ಹರಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಕಳೆದ ನಾಲ್ಕು ವರ್ಷಗಳಿಂದ ಅನಾವೃಷ್ಟಿಯಿಂದ ಸರಿಯಾಗಿ ಬೆಳೆ ಬಾರದೆ ರೈತರು ಅತ್ಯಂತ ಸಂಕಷ್ಟದಲ್ಲಿದ್ದಾರೆ. ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ, ಆಗಸ್ಟ್‌ ತಿಂಗಳ ಮೊದಲ ಎರಡು ವಾರಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಎಡದಂಡೆ ನಾಲೆಗೆ ನೀರು ಹರಿಸುವ ಸಂಬಂಧ ಈ ಭಾಗದ ಎಲ್ಲ ಶಾಸಕರೂ ಗಮನ ಹರಿಸಬೇಕು.

ಒಂದು ವೇಳೆ ಮುಂದಿನ ದಿನಗಳಲ್ಲಿ ನೀರಿನ ಅಭಾವ ಎದುರಾಗುವ ಸೂಚನೆ ಇದ್ದರೆ, ಅದನ್ನು ಸರ್ಕಾರ ಮೊದಲೇ ಸ್ಪಷ್ಟಪಡಿಸಬೇಕು. ಇದರಿಂದ ಯಾವ ಬೆಳೆ ಬೆಳೆಯಬೇಕು ಎನ್ನುವ ತೀರ್ಮಾನ ಕೈಗೊಳ್ಳಲು ರೈತರಿಗೆ ನೆರವಾಗುತ್ತದೆ.

ವಿಜಯ್‌ಕುಮಾರ್ ಎಚ್.ಕೆ., ರಾಯಚೂರು

Post Comments (+)