ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾವು ಹೋರಾಟಗಾರರು...

Last Updated 12 ಫೆಬ್ರುವರಿ 2020, 19:45 IST
ಅಕ್ಷರ ಗಾತ್ರ

ತುರ್ತು ಪರಿಸ್ಥಿತಿಯಲ್ಲಿ ಜೈಲು ಶಿಕ್ಷೆ ಅನುಭವಿಸಿದ ಹೋರಾಟಗಾರರಿಗೆ ರಾಜ್ಯ ಸರ್ಕಾರದಿಂದ ಪಿಂಚಣಿ ಸೌಲಭ್ಯ ಒದಗಿಸುವ ಪ್ರಯತ್ನ ನಡೆದಿರುವಾಗಲೇ, ಇದುಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೆ ನಡೆದ ಹೋರಾಟವಾದ್ದರಿಂದ ಪಿಂಚಣಿ ಸೌಲಭ್ಯ ಒದಗಿಸಲು ಆರ್‌ಎಸ್‌ಎಸ್ ಸಹಮತ ಇಲ್ಲ ಎನ್ನುವ ಅಭಿಪ್ರಾಯ ತಿಳಿದು ದುಃಖವಾಯಿತು. ತುರ್ತು ಪರಿಸ್ಥಿತಿ ಹೋರಾಟದಲ್ಲಿ ಭಾಗಿಯಾಗಿದ್ದ ನಾವು ನಮ್ಮ ಗೋಳನ್ನು ಯಾರ ಬಳಿಯೂ ಹೇಳಿಕೊಳ್ಳಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಮಗೆ ಈಗ ತೀರಾ ಅಗತ್ಯವಾದ ಔಷಧಿ ಖರೀದಿಗೂ ತತ್ವಾರ ಉಂಟಾಗಿದೆ. ಪಿಂಚಣಿ ಸೌಲಭ್ಯ ದೊರೆತರೆ ಜೀವನದ ಸಂಧ್ಯಾ ಕಾಲದಲ್ಲಿ ನಮಗೆ ಉಪಕಾರವಾಗುತ್ತದೆ.

ಈಗಾಗಲೇ 40 ವರ್ಷಗಳಿಗೂ ಹೆಚ್ಚು ಕಾಲ ಉರುಳಿಹೋಗಿರುವುದರಿಂದ ಈ ಪಿಂಚಣಿ ಸೌಲಭ್ಯಕ್ಕೆ ಅರ್ಹರಾದವರ ಸಂಖ್ಯೆಯೂ ಹೆಚ್ಚಿಲ್ಲ. ಆದ್ದರಿಂದ ನಮ್ಮಂತಹ ಹಿರಿಯ ಜೀವಗಳಿಗೆ ಅನುಕೂಲ ಮಾಡಿಕೊಡುವ ಈ ಸೌಲಭ್ಯವನ್ನು ಅನುಷ್ಠಾನಕ್ಕೆ ತರಬೇಕು ಎನ್ನುವುದು ನಮ್ಮ ಮನವಿ.

ಗಣೇಶ್,ಬಳ್ಳಾರಿ, ಅನಂತಸ್ವಾಮಿ,ಕೋಲಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT