ಗುರುವಾರ , ಸೆಪ್ಟೆಂಬರ್ 29, 2022
26 °C

ಕನ್ನಡ ಬಳಕೆ ಹೆಚ್ಚಿಸೋಣ

ವಾಚಕರ ವಾಣಿ Updated:

ಅಕ್ಷರ ಗಾತ್ರ : | |

ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸುವುದಕ್ಕಾಗಿ ಮಸೂದೆಯೊಂದನ್ನು ಮಂಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇದು, ಸ್ವಾಗತಾರ್ಹ ನಡೆ. ಭಾಷೆಯ ವಿಚಾರದಲ್ಲಿ ದಿಟ್ಟ ನಿಲುವು ತಳೆಯಬೇಕಾದುದು ಇಂದಿನ ಅಗತ್ಯ. ಚುನಾಯಿತ ಪ್ರತಿನಿಧಿಗಳ ಬಹುಮುಖ್ಯ ಜವಾಬ್ದಾರಿಯೂ ಹೌದು. ಪಕ್ಷಭೇದ ಮರೆತು ಎಲ್ಲರೂ ಇದಕ್ಕೆ ಬೆಂಬಲವಾಗಿ ನಿಲ್ಲಬೇಕು.

ಕನ್ನಡದ ಬಳಕೆಯು ಬದುಕಿನ ಎಲ್ಲ ವಲಯಗಳಲ್ಲೂ ಹೆಚ್ಚಾಗಬೇಕು. ಗಡಿನಾಡು ಕನ್ನಡಿಗರಲ್ಲಿ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸವೂ ಆಗಬೇಕು. ನೇಮಕಾತಿಗಳಲ್ಲಿ ಕನ್ನಡ ಭಾಷಾ ಜ್ಞಾನ ಕಡ್ಡಾಯ ಮಾಡುವುದರಿಂದ ಕನ್ನಡ ಕಲಿಕೆಗೆ ಒತ್ತಾಸೆ ಸಿಗುತ್ತದೆ. ಈ ದಿಸೆಯಲ್ಲಿ ಸರ್ಕಾರ ದೃಢ ಹೆಜ್ಜೆ ಇಡಬೇಕು.

– ಹುಸೇನಬಾಷಾ ತಳೇವಾಡ, ಹುಬ್ಬಳ್ಳಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.