ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅದ್ಧೂರಿ ಸ್ವಾಗತ ತರವೇ?

Last Updated 5 ಫೆಬ್ರುವರಿ 2021, 19:30 IST
ಅಕ್ಷರ ಗಾತ್ರ

ಬೆಂಗಳೂರಿನ ಜೈಲಿನಿಂದ ಇತ್ತೀಚೆಗೆ ಬಿಡುಗಡೆಯಾಗಿರುವಎಐಎಡಿಎಂಕೆ ನಾಯಕಿ ವಿ.ಕೆ.ಶಶಿಕಲಾ ಅವರನ್ನು ಚೆನ್ನೈನಲ್ಲಿ ಅದ್ಧೂರಿಯಾಗಿ ಸ್ವಾಗತಿಸಲು ಅಲ್ಲಿನ ಒಂದು ಪಕ್ಷದ ರಾಜಕೀಯ ನಾಯಕರು, ಕಾರ್ಯಕರ್ತರು ಸಿದ್ಧತೆ ನಡೆಸಿದ್ದಾರೆ. ಶಶಿಕಲಾ ಪ್ರಯಾಣದ ಸಂದರ್ಭದಲ್ಲಿ ಹೆಲಿಕಾಪ್ಟರ್ ಮೂಲಕ ಪುಷ್ಪಗಳನ್ನು ಸುರಿಯಲು ಅನುಮತಿ ಕೋರಿ ಮಾಜಿ ಶಾಸಕಿಯೊಬ್ಬರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ರೀತಿ ಅದ್ಧೂರಿಯಾಗಿ ಸ್ವಾಗತಿಸುವ ಕಾರ್ಯ ಹೇಸಿಗೆ ತರುವಂಥದ್ದು.

ಈ ರಾಜಕೀಯ ನಾಯಕರು ಮುಂದಿನ ಪೀಳಿಗೆಗೆ ಏನು ಸಂದೇಶ ಕೊಡಲು ಹೊರಟಿದ್ದಾರೆ ಎಂಬುದನ್ನು ನೆನೆದರೆ ಆತಂಕ ಆಗುತ್ತದೆ. ಶಶಿಕಲಾ ಭ್ರಷ್ಟಾಚಾರ ಮತ್ತು ಆದಾಯ ಮೀರಿ ಆಸ್ತಿ ಗಳಿಕೆಯ ಆರೋಪ ಸಾಬೀತಾಗಿ ಜೈಲು ವಾಸ ಅನುಭವಿಸಿದವರು. ಅವರೇನೂ ಜನರಿಗಾಗಿ, ನ್ಯಾಯಕ್ಕಾಗಿ ಅಥವಾ ದೇಶಕ್ಕಾಗಿ ಹೋರಾಟ ಮಾಡಿ ಜೈಲು ಶಿಕ್ಷೆ ಅನುಭವಿಸಿದವರಲ್ಲ. ಅಂತಹ ವ್ಯಕ್ತಿಯನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳುತ್ತಿರುವ ಈ ಜನನಾಯಕರು, ತಾವು ಎಂತಹ ಮತಿಹೀನರು ಎಂಬುದನ್ನು ಸಾಬೀತು ಮಾಡುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜೈಲಿನಿಂದ ಬಿಡುಗಡೆ ಆಗುವವರನ್ನು ಅದ್ಧೂರಿಯಾಗಿ ಸ್ವಾಗತಿಸುವ ಪರಿಪಾಟ ಹೆಚ್ಚುತ್ತಿದೆ. ಇದನ್ನು ತಡೆಗಟ್ಟುವ ಕೆಲಸ ನ್ಯಾಯಾಂಗದ ವತಿಯಿಂದ ಆಗಬೇಕಿದೆ.

ವಿ.ತಿಪ್ಪೇಸ್ವಾಮಿ, ಹಿರಿಯೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT