ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾನ್ಸರ್‌ ಚಿಕಿತ್ಸಾ ಕೇಂದ್ರ: ಮಾನದಂಡ ಏನು?

Last Updated 11 ಮಾರ್ಚ್ 2021, 19:31 IST
ಅಕ್ಷರ ಗಾತ್ರ

ಕ್ಯಾನ್ಸರ್ ರೋಗಿಗಳಿಗೆ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ನೀಡಲು ಶಿವಮೊಗ್ಗ ಮತ್ತು ಮೈಸೂರಿನಲ್ಲಿ ಪ್ರಾದೇಶಿಕ ಕ್ಯಾನ್ಸರ್ ಚಿಕಿತ್ಸಾ ಕೇಂದ್ರಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಯೋಚಿಸಿರುವುದು ಒಳ್ಳೆಯ ಉದ್ದೇಶ. ಆದರೆ ಯಾವ ಮಾನದಂಡಗಳ ಆಧಾರದ ಮೇಲೆ ಕೇಂದ್ರಗಳನ್ನು ಈ ಜಿಲ್ಲೆಗಳಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂಬುದು ತಿಳಿಯದು.

ಕ್ಯಾನ್ಸರ್‌ಪೀಡಿತರು ಈಶಾನ್ಯ ಮತ್ತು ಉತ್ತರ ಕರ್ನಾಟಕದ ಭಾಗದಲ್ಲಿ ಹೆಚ್ಚಾಗಿದ್ದು, ರೋಗಿಗಳು ಶಿವಮೊಗ್ಗ ಅಥವಾ ಮೈಸೂರಿಗೆ ಬರಲು ಚಿಕಿತ್ಸಾ ವೆಚ್ಚಕ್ಕಿಂತ ಸಾರಿಗೆ ವೆಚ್ಚವನ್ನೇ ಹೆಚ್ಚಾಗಿ ಭರಿಸಬೇಕಾಗುತ್ತದೆ. ಆದ್ದರಿಂದ ಎರಡರಲ್ಲಿ ಒಂದು ಕೇಂದ್ರವನ್ನಾದರೂ ಈ ಭಾಗದಲ್ಲಿ ಸ್ಥಾಪಿಸಿದರೆ ಕೇಂದ್ರ ಸ್ಥಾಪನೆಯ ನಿಜವಾದ ಉದ್ದೇಶ ಈಡೇರಿದಂತಾಗುತ್ತದೆ.

-ಮೋನಿಕ ಆರ್., ಚಿಕ್ಕಗೊಂಡನಹಳ್ಳಿ, ಚಿತ್ರದುರ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT