ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಿಳಿದೂ ತಪ್ಪು ಮಾಡಿದರೆ ಕ್ಷಮೆ ಯಾಕೆ?

Last Updated 7 ಸೆಪ್ಟೆಂಬರ್ 2021, 19:30 IST
ಅಕ್ಷರ ಗಾತ್ರ

ರಾಜ್ಯ ಸರ್ಕಾರವು ಆನ್‌ಲೈನ್‌ ಜೂಜನ್ನು ‘ಕರ್ನಾಟಕ ಪೊಲೀಸ್ ಕಾಯ್ದೆ- 1963’ಕ್ಕೆ ತಿದ್ದುಪಡಿ ತರುವ ಮೂಲಕ ನಿಷೇಧಿಸಲು ಮುಂದಾಗಿರುವುದು ಸ್ವಾಗತಾರ್ಹ ನಿರ್ಧಾರ. ಇದರಿಂದ ಎಷ್ಟೋ ಜನ ಬೀದಿಗೆ ಬೀಳುವುದು, ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪಬಹುದು. ಮೊದಲ ಬಾರಿ ಸಿಕ್ಕಿಬಿದ್ದರೆ ಆರು ತಿಂಗಳು ಜೈಲು ಶಿಕ್ಷೆ ಮತ್ತು ₹ 10 ಸಾವಿರ ದಂಡ ವಿಧಿಸಲು ತೀರ್ಮಾನಿಸಲಾಗಿದೆ. ಆದರೆ ಮೊದಲ ಬಾರಿ ಸಿಕ್ಕಿಬಿದ್ದರೆ ವಿನಾಯಿತಿ ಇದೆ ಎನ್ನುವ ಕಾರಣಕ್ಕೆ ಹಳೆ ಚಾಳಿ ಮುಂದುವರಿಸುವ ಸಾಧ್ಯತೆಯಿದೆ. ಆನ್‌ಲೈನ್‌ನಲ್ಲಿ ಜೂಜಾಡುವವರು ಅನಕ್ಷರಸ್ಥರಲ್ಲ. ಹಾಗಾಗಿ ಅವರಿಗೆ ಯಾವುದೇ ವಿನಾಯಿತಿ ನೀಡುವುದು ಸೂಕ್ತವಲ್ಲ. ಏಕೆಂದರೆ, ತಪ್ಪೆಂದು ತಿಳಿದೂ ಮಾಡಿದ ಮೇಲೆ ಯಾರೂ ಕ್ಷಮೆಗೆ ಅರ್ಹರಲ್ಲ.

- ಪುನೀತ್ ಕುಮಾರ್ ಎ.ಆರ್.ಉಜಿರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT