ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ಲಾಸ್ಟಿಕ್ ಧ್ವಜಕ್ಕೆ ಯಾಕಿಲ್ಲ ನಿಷೇಧ?

Last Updated 3 ಆಗಸ್ಟ್ 2021, 16:52 IST
ಅಕ್ಷರ ಗಾತ್ರ

ರಾಷ್ಟ್ರೀಯ ಹಬ್ಬ ಸ್ವಾತಂತ್ರ್ಯ ದಿನಾಚರಣೆ ಸಮೀಪಿಸುತ್ತಿದೆ. ರಾಷ್ಟ್ರಧ್ವಜವನ್ನು ಪ್ಲಾಸ್ಟಿಕ್‌ನಲ್ಲಿ ತಯಾರಿಸಿ ಬೀದಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ಇಂತಹ ರಾಷ್ಟ್ರಧ್ವಜವು ಬಳಸಿದ ನಂತರ ಕಸದ ರಾಶಿ ಸೇರುವುದರಿಂದ ಧ್ವಜಕ್ಕೆ ಅಪಮಾನ ಮಾಡಿದಂತಾಗುತ್ತದೆ. ಅಂಗಡಿಗಳಲ್ಲಿ ಪ್ಲಾಸ್ಟಿಕ್ ಚೀಲ ಮಾರಾಟ ನಿಷೇಧಿಸಿರುವ ಸರ್ಕಾರ, ಪ್ಲಾಸ್ಟಿಕ್‌ ರಾಷ್ಟ್ರಧ್ವಜಗಳ ಮಾರಾಟ ನಡೆಯುತ್ತಿದ್ದರೂ ಕಣ್ಣುಮುಚ್ಚಿ ಕುಳಿತಿದೆ. ಪ್ಲಾಸ್ಟಿಕ್ ರಾಷ್ಟ್ರಧ್ವಜಗಳಿಂದ ಪರಿಸರ ಮಾಲಿನ್ಯ ಉಂಟಾಗುತ್ತದೆ. ಈ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪೊಲೀಸರು ಕ್ರಮ ಕೈಗೊಳ್ಳಬೇಕಿದೆ.

-ಲಕ್ಷ್ಮೀಕಾಂತರಾಜು ಎಂ.ಜಿ.,ಮಠಗ್ರಾಮ, ಗುಬ್ಬಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT