ಗುರುವಾರ , ಜನವರಿ 28, 2021
26 °C

ಅನುದಾನಿತ ನೌಕರರಿಗೆ ಉಚಿತ ಚಿಕಿತ್ಸೆ ಏಕಿಲ್ಲ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ಕಾರಿ ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ ₹ 50 ಲಕ್ಷದವರೆಗೆ ಉಚಿತ ಚಿಕಿತ್ಸೆ ಕೊಡಿಸುವ ಉದ್ದೇಶವನ್ನು ಸರ್ಕಾರಿ ನೌಕರರ ಸಂಘ ಹೊಂದಿದ್ದು, ಈ ಯೋಜನೆಗೆ ತಗಲುವ ವೆಚ್ಚವನ್ನು ಭರಿಸಲು ಹಣಕಾಸು ಇಲಾಖೆ ಒಪ್ಪಿರುವುದಾಗಿ ವರದಿಯಾಗಿದೆ (ಪ್ರ.ವಾ., ಡಿ. 2). ಇದು ಒಳ್ಳೆಯ ಯೋಜನೆ. ಆದರೆ ಈ ಸೌಲಭ್ಯದಿಂದ ಅನುದಾನಿತ ಖಾಸಗಿ ಸಂಸ್ಥೆಗಳ ನೌಕರರು ಹೊರಗುಳಿದಿರುವುದು ವಿಪರ್ಯಾಸವೇ ಸರಿ. ಅನುದಾನಿತ ನೌಕರರು ಸರ್ಕಾರದಿಂದ ವೇತನ, ಭತ್ಯೆಯಂತಹ ಸೌಲಭ್ಯಗಳನ್ನು ಪಡೆಯುತ್ತಿದ್ದರೂ ಈ ಯೋಜನೆ ಮಾತ್ರ ಅವರನ್ನು ಒಳಗೊಂಡಿಲ್ಲವೇಕೆ? ಅವರಿಗೆ ಅನಾರೋಗ್ಯದ ಸಮಸ್ಯೆಗಳು ಕಾಡುವುದಿಲ್ಲವೇ? ಇದನ್ನು ಸರ್ಕಾರ ಗಂಭೀರವಾಗಿ ಪರಿಶೀಲಿಸಬೇಕಾಗಿದೆ.

ಡಾ. ಸಿದ್ದಲಿಂಗಪ್ಪ ಕೊಟ್ನೆಕಲ್, ಕೊಪ್ಪಳ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.