ಮಂಗಳವಾರ, ಅಕ್ಟೋಬರ್ 22, 2019
23 °C

ವನ್ಯಜೀವಿಗಳ ದಾಳಿ: ನಿರಂತರ ಸಂಘರ್ಷಕ್ಕೆ ಬೇಕಿದೆ ಪರಿಹಾರ

Published:
Updated:

ವನ್ಯಜೀವಿಗಳ ದಾಳಿಯಿಂದ ಸಾವಿಗೀಡಾಗುವವರ ಕುಟುಂಬಕ್ಕೆ ₹ 10 ಲಕ್ಷ ಪರಿಹಾರ ನೀಡುವುದೇನೋ ಸರಿ (ಪ್ರ.ವಾ., ಸೆ. 27). ಆದರೆ ಎಷ್ಟೇ ಕೋಟಿ ಕೊಟ್ಟರೂ ಹೋದ ಜೀವ ಮರಳಿ ಬಾರದು. ಜೀವಕ್ಕೆ ಬೆಲೆ ಕಟ್ಟಲಾದೀತೇ? ಮಾನವನ ದುರಾಸೆ ಮತ್ತು ಸ್ವಾರ್ಥದಿಂದಾಗಿ ಪ್ರಾಣಿಗಳ ಜೊತೆಗೆ ಆತನಿಗೆ ನಿರಂತರವಾಗಿ ಸಂಘರ್ಷ ನಡೆಯುತ್ತಲೇ ಇದೆ. ಮಾನವ ತನ್ನ ಸ್ವಾರ್ಥಕ್ಕೋಸ್ಕರ ಕಾಡುಗಳನ್ನು ಸರ್ವನಾಶ ಮಾಡಲು ಹೊರಟಿದ್ದಾನೆ. ಆಹಾರ ಸರಪಳಿಯ ವ್ಯತ್ಯಾಸದಿಂದ ಪ್ರಾಣಿಗಳು ನಾಡಿನ ಕಡೆಗೆ ಹೆಜ್ಜೆ ಹಾಕುತ್ತಿವೆ. ಸರ್ಕಾರ ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಭಾರಿ ಬೆಲೆ ತೆರಬೇಕಾಗುತ್ತದೆ.

-ಮುರುಗೇಶ ಡಿ., ದಾವಣಗೆರೆ

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)