ಹೇಳುವುದೊಂದು, ಮಾಡುವುದು ಇನ್ನೊಂದು

ಮಂಗಳವಾರ, ಜೂನ್ 25, 2019
30 °C

ಹೇಳುವುದೊಂದು, ಮಾಡುವುದು ಇನ್ನೊಂದು

Published:
Updated:

ಹಿಂದಿನವರು ಪರಿಸರದ ಬಗ್ಗೆ ತಿಳಿದುಕೊಂಡಿದ್ದಕ್ಕಿಂತ ಹೆಚ್ಚಾಗಿ ಅವರ ಬದುಕಿನ ಶೈಲಿಯೇ ಪರಿಸರಕ್ಕೆ ಪೂರಕವಾಗಿ ಇರುತ್ತಿತ್ತು. ಆದರೆ ಇಂದಿನವರು ಪರಿಸರಕ್ಕೆ ಪೂರಕವಾಗಿ ಬದುಕುವುದಿಲ್ಲ, ಬದಲಿಗೆ ಅದರ ಬಗ್ಗೆ ಹೆಚ್ಚೆಚ್ಚು ತಿಳಿದುಕೊಂಡಿರುತ್ತಾರೆ!

ಪರಿಸರವು ಮಲಿನವಾಗುವ ಬಗೆ, ಅದರಿಂದಾಗುವ ದುಷ್ಪರಿಣಾಮಗಳು, ಮಾಲಿನ್ಯ ತಡೆಗೆ ವಹಿಸಬೇಕಾದ ಎಚ್ಚರಿಕೆ ಕ್ರಮಗಳು... ಹೀಗೆ ವಿವಿಧ ವಿಷಯಗಳನ್ನು ಕೊಟ್ಟರೆ ಗಂಟೆಗಟ್ಟಲೆ ಉಪನ್ಯಾಸ ಕೊಡುವಷ್ಟರ ಮಟ್ಟಿಗೆ ಅನೇಕ ವಿದ್ಯಾವಂತರು ಜ್ಞಾನ ಹೊಂದಿರುತ್ತಾರೆ. ಆದರೆ ಅವರಲ್ಲಿ ಹೆಚ್ಚಿನವರು ಪರಿಸರ ರಕ್ಷಣೆಗೆ ಸಂಬಂಧಿಸಿದಂತೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುವ ಕ್ರಮಗಳು ಮಾತ್ರ ನಗಣ್ಯ ಎಂಬಂತೆ ಇರುತ್ತವೆ. ಉನ್ನತ ಶಿಕ್ಷಣ ಪಡೆದಿರುವವರು ಏರ್ಪಡಿಸುವ ಸಮಾರಂಭಗಳಲ್ಲೂ ಹೆಚ್ಚೆಚ್ಚು ಪ್ಲಾಸ್ಟಿಕ್ ಸಾಮಗ್ರಿ ಬಳಕೆಯಾಗುತ್ತದೆ. ಇದರಿಂದ ಪ್ಲಾಸ್ಟಿಕ್ ತ್ಯಾಜ್ಯವು ದಿನ ದಿನಕ್ಕೂ ಹೆಚ್ಚಾಗುತ್ತಾ ಹೋಗುತ್ತಿದೆ. ಪರಿಸರ ಸಂರಕ್ಷಣೆ ಎಂದರೆ ಬರೀ ಗಿಡಗಳನ್ನು ನೆಡುವುದು ಮಾತ್ರವಲ್ಲದೆ ಇಂತಹ ವಿಚಾರಗಳ ಕಡೆಗೂ ಗಮನ ಕೊಡಬೇಕಾಗುತ್ತದೆ.

ಬಸವನಗೌಡ ಹೆಬ್ಬಳಗೆರೆ, ಚನ್ನಗಿರಿ

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !