ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲಂಕಾರಕ್ಕೆ ಬಳಸುವ ವಿದ್ಯುತ್ ಕಡಿತ ಮಾಡಿ

Last Updated 7 ನವೆಂಬರ್ 2012, 19:30 IST
ಅಕ್ಷರ ಗಾತ್ರ

ಮುಂದಿನ ಫೆಬ್ರುವರಿ ತಿಂಗಳಿನಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗಲಿವೆ. ಅದರ ನಂತರ ಏಪ್ರಿಲ್ 1 ರಿಂದ 10ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಇಂತಹ ಸಂದರ್ಭದಲ್ಲಿ ಇಂಧನ ಸಚಿವೆ ಶೋಭಾ ಕರಂದ್ಲಾಜೆ ಫೆಬ್ರುವರಿ ಆರಂಭದಿಂದಲೇ ವಿದ್ಯುತ್ ಸಮಸ್ಯೆ ಕಾಲಿಡಲಿದೆ ಎಂದಿದ್ದಾರೆ. 

ಈ ರೀತಿ ವಿದ್ಯುತ್ ಕಡಿತ ಮಾಡುವುದರಿಂದ ವಿದ್ಯಾರ್ಥಿಗಳ ಅಭ್ಯಾಸಕ್ಕೆ ತೊಂದರೆಯಾಗುತ್ತದೆ. ಬೆಂಗಳೂರು, ಮಂಗಳೂರು, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಇತರ ನಗರಗಳಲ್ಲಿ ಅನಗತ್ಯವಾಗಿ ವ್ಯಯ ಮಾಡುತ್ತಿರುವ ಮತ್ತು ಅಲಂಕಾರಕ್ಕಾಗಿ ಬಳಕೆ ಮಾಡುತ್ತಿರುವ ವಿದ್ಯುತ್ ಕಡಿತಗೊಳಿಸಿ ಪರೀಕ್ಷೆಯ ದೃಷ್ಟಿಯಿಂದ ಆದರೂ ವಿದ್ಯಾರ್ಥಿಗಳಿಗೆ ನೆರವಾಗುವ ರೀತಿಯಲ್ಲಿ ವಿದ್ಯುತ್ ನೀಡಿ. ಯಾವುದೇ ಕಾರಣಕ್ಕೂ ವಿದ್ಯುತ್ ಕಡಿತಗೊಳಿಸಬೇಡಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT