ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಮತಗಟ್ಟೆ : ಶಾಲೆಗಳಲ್ಲಿ ಬೇಡ

Last Updated 14 ಫೆಬ್ರುವರಿ 2013, 19:59 IST
ಅಕ್ಷರ ಗಾತ್ರ

ಚುನಾವಣಾ ಆಯೋಗವು ಸುಪ್ರೀಂ ಕೋರ್ಟಿನ ಆದೇಶದಂತೆ ಸ್ಥಳೀಯ ಸರ್ಕಾರಗಳ ಚುನಾವಣೆಯನ್ನು 2007ರ ಮೀಸಲು ಪಟ್ಟಿಯನ್ವಯ ನಡೆಸಲು ನಿರ್ಧರಿಸಿರುವುದು ಸ್ವಾಗತಾರ್ಹ. ಅದರಂತೆ ಮಾರ್ಚ್‌ನಲ್ಲಿ ನಡೆಯುವ ಈ ಪ್ರಕ್ರಿಯೆಗೆ ಆಯೋಗವು ಶಾಲಾ-ಕಾಲೇಜುಗಳ ಕೊಠಡಿಗಳನ್ನು ಮತಗಟ್ಟೆಗಳನ್ನಾಗಿ ಬಳಸಿಕೊಳ್ಳಬೇಕಾಗುತ್ತದೆ.

ಆದರೆ ಇಲ್ಲಿ ಗಮನಿಸಲೇ ಬೇಕಾದ ಪ್ರಮುಖ ಅಂಶವೆಂದರೆ ಮಾರ್ಚ್ 13ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಲಿವೆ. ಜೊತೆಗೆ ಅದಕ್ಕೂ ಮೊದಲೇ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಈಗಾಗಲೇ ನಿರ್ಧರಿಸಲಾಗಿದೆ.

ಆದ್ದರಿಂದ ಈ ಸಂದರ್ಭದಲ್ಲಿ ವಿದ್ಯಾರ್ಥಿಗಳ ಪರೀಕ್ಷಾ  ಮತ್ತು ಭವಿಷ್ಯದ ದೃಷ್ಟಿಯಿಂದ ಪ್ರತಿಯೊಂದು ದಿನದ ತರಬೇತಿಗಳು ಕೂಡಾ ಮಹತ್ವ ಪಡೆದಿರುತ್ತವೆ. ಈ ಅಮೂಲ್ಯ ಸಮಯದಲ್ಲಿ ಚುನಾವಣೆಗಳು ಅವರಿಗೆ ಅಡ್ಡಿಯಾಗುತ್ತದೆ.

ಆದ್ದರಿಂದ ಆಯೋಗವು ಚುನಾವಣಾ ಪ್ರಕ್ರಿಯೆಗಾಗಿ ಶಾಲಾ-ಕಾಲೇಜುಗಳನ್ನು ಬಿಟ್ಟು ಮತಗಟ್ಟೆಗಳಿಗಾಗಿ ಪರ್ಯಾಯ ಮಾರ್ಗವನ್ನು ಕಂಡುಕೊಳ್ಳಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT