ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಲಮಂಡಳಿಯ ವಿಳಂಬ ನೀತಿ

Last Updated 29 ಏಪ್ರಿಲ್ 2013, 19:59 IST
ಅಕ್ಷರ ಗಾತ್ರ

ಮೈಸೂರು ರಸ್ತೆ ಸೇವಾ ಠಾಣೆ ವ್ಯಾಪ್ತಿಯಲ್ಲಿ ಗ್ರಾಹಕರು ನೀರಿನ ಸಂಪರ್ಕಕ್ಕಾಗಿ ಅರ್ಜಿಗಳನ್ನು ಗುತ್ತಿಗೆದಾರರ ಮೂಲಕ ಸಲ್ಲಿಸಿದಾಗ, ನಿಗದಿತ ವೇಳೆಯಲ್ಲಿ ತಪಾಸಣೆ ನಡೆಸಿ ಮೇಲಿನ ಅಧಿಕಾರಿಗಳಿಗೆ ಕಡತವನ್ನು ವಿಲೇವಾರಿ ಮಾಡಲು ಸ್ಥಳೀಯ ಅಧಿಕಾರಿಗಳು ಕಾರ್ಯನಿರ್ವಹಿಸುವಲ್ಲಿ ವಿಳಂಬ ನೀತಿ ಅನುಸರಿಸಿರುತ್ತಾರೆ. ಅಲ್ಲದೇ ಗುತ್ತಿಗೆದಾರರನ್ನು ಮಧ್ಯವರ್ತಿಗಳನ್ನಾಗಿ ಬಳಸಿಕೊಂಡು ಗ್ರಾಹಕರನ್ನು ಹಣಕ್ಕಾಗಿ ಪೀಡಿಸುತ್ತಾರೆ.

ಜಲಮಂಡಲಿಯ ಈ ವಿಳಂಬ ನೀತಿಯಿಂದಾಗಿ, ಸರ್ಕಾರದ `ನಿಗದಿತ ಅವಧಿಯಲ್ಲಿ ಸಂಪರ್ಕ ನೀಡುವ ಮತ್ತು ಇತರೆ ಸೇವೆಗಳಿಗೂ ಕಾಲಾವಧಿ ನಿಗದಿಪಡಿಸುವ' ಸಕಾಲ ಯೋಜನೆಯಿಂದ ಯಾವುದೇ ಪ್ರಯೋಜನ ಆಗುತ್ತಿಲ್ಲ. ಗ್ರಾಹಕರ ದೂರುಗಳಿಗೂ ಸಮಪರ್ಕವಾಗಿ ಹಾಗೂ ತುರ್ತಾಗಿ ಸ್ಪಂದಿಸುವಲ್ಲಿ ವಿಫಲರಾಗಿದ್ದಾರೆ.

ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನಹರಿಸಿ ಗ್ರಾಹಕಸ್ನೇಹಿ ಅಧಿಕಾರಿಗಳನ್ನು ನೇಮಿಸಿ ಸಕಾಲ ಯೋಜನೆಯಂತೆ ಎಲ್ಲಾ ಕಡತಗಳು ನಿಗದಿತ ಅವಧಿಯಲ್ಲಿ ವಿಲೇವಾರಿಯಾಗುವಂತೆ ಅವಶ್ಯ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಿ.
- ಶ್ರೀಕೃಷ್ಣ .

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT