ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀರ್ಪು ಅಂತಿಮವಾಗಲಿ

Last Updated 19 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ಜನ ಪ್ರತಿನಿಧಿಗಳ ವಿರುದ್ಧ ದಾಖಲಾಗಿರುವ ಅಪರಾಧ ಆರೋಪಗಳ ವಿಚಾರಣೆ ತೀವ್ರಗತಿಯಲ್ಲಿ ನಡೆದು, ಅವುಗಳಿಗೆ ತಾರ್ಕಿಕ ಅಂತ್ಯ ಹಾಡಬೇಕೆಂಬ ಉದ್ದೇಶದಿಂದ ವಿಶೇಷ ನ್ಯಾಯಾಲಯಗಳ ಸ್ಥಾಪನೆಗೆ ಒಪ್ಪಿಗೆ ಸೂಚಿಸುವ ಮೂಲಕ ಸುಪ್ರೀಂ ಕೋರ್ಟ್‌ ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿಹಿಡಿದಿದೆ.

ಇಂಥ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಿದರೆ ಸಾಲದು, ಪ್ರಕರಣಗಳನ್ನು ಕಾಲಮಿತಿಯೊಳಗೆ ಬಗೆಹರಿಸುವ ವ್ಯವಸ್ಥೆ ಆಗಬೇಕು ಮತ್ತು ವಿಶೇಷ ನ್ಯಾಯಾಲಯದ ತೀರ್ಪೇ ಅಂತಿಮ ಎಂಬಂತಾಗಬೇಕು. ಇಲ್ಲಿ ವಿಚಾರಣೆ ನಡೆಸಿ ತೀರ್ಪು ಘೋಷಿಸಿದ ಬಳಿಕ ಆರೋಪಿಗಳಿಗೆ ಮೇಲ್ಮನವಿಗೆ ಅವಕಾಶ ಕೊಟ್ಟರೆ ವಿಶೇಷ ನ್ಯಾಯಾಲಯ ಸ್ಥಾಪನೆಯ ಉದ್ದೇಶ ಸಫಲವಾಗುವುದಿಲ್ಲ. ಬದಲಿಗೆ, ‘ವಿಶೇಷ ನ್ಯಾಯಾಲಯಗಳನ್ನು ಯಾವ ಪುರುಷಾರ್ಥಕ್ಕೆ ಸ್ಥಾಪಿಸಲಾಯಿತು’ ಎಂದು ಜನರು ಪ್ರಶ್ನಿಸುವಂತಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT