ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುಸ್ತಕ ಪ್ರಾಧಿಕಾರ ಸ್ಪಂದಿಸಲಿ

Last Updated 23 ಜೂನ್ 2014, 19:30 IST
ಅಕ್ಷರ ಗಾತ್ರ

ಕನ್ನಡ ಪುಸ್ತಕ ಪ್ರಾಧಿಕಾರ ಈ ಹಿಂದೆ ಸಾಮಾನ್ಯ ಓದುಗರಲ್ಲಿ ವಾಚನಾಭಿರುಚಿ ವೃದ್ಧಿಸುವ ಅಂಶಗಳನ್ನು ರೂಢಿಸುವಲ್ಲಿ ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ಪ್ರತೀ ವರ್ಷ ನೂರಾರು ಹೊಸ ಕೃತಿಗಳು ಲೋಕಾರ್ಪಣೆಗೊಳ್ಳುತ್ತಲೇ ಇವೆ. ವಿಪರ್ಯಾಸದ ಸಂಗತಿಯೆಂದರೆ ಈ ಪುಸ್ತಕಗಳನ್ನು ಓದುವ ಸಹೃದಯರ ಕೊರತೆ ದಿನದಿಂದ ದಿನಕ್ಕೆ ಇಮ್ಮಡಿಯಾಗುತ್ತಾ, ಕನ್ನಡ ಪುಸ್ತಕಗಳು ಪಳೆಯುಳಿಕೆಗಳಾಗಿ ಕೊಳೆಯುತ್ತಿವೆ.  ಶಾಲಾ- ಕಾಲೇಜು ವಿದ್ಯಾರ್ಥಿಗಳಲ್ಲಿ ಪಠ್ಯಪುಸ್ತಕ ಓದುವುದೇ ಹೆಚ್ಚಾಗಿ, ಪಠ್ಯೇತರ ಪುಸ್ತಕ ಓದುವ ಪ್ರೇಮ ಕ್ಷೀಣಿಸಿದೆ. ಇಂತಹ ಬಿಕ್ಕಟ್ಟಿನ ಪರಿಸ್ಥಿತಿ­ಯನ್ನು ಕನ್ನಡ ಸಾಹಿತ್ಯ ಎದುರಿಸುತ್ತಿ­ರುವುದು ಶೋಚನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ನೂತನ ಅಧ್ಯಕ್ಷ ಬಂಜಗೆರೆ ಜಯಪ್ರಕಾಶ್‌­ ಅವರು ಪ್ರಾಧಿಕಾರಕ್ಕೆ ಹೊಸ ಆಯಾಮ ತಂದುಕೊಡುವ ನಿಟ್ಟಿನಲ್ಲಿ ಸ್ಪಂದಿಸಲಿ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT