ಭಾನುವಾರ, 12 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಮಾದವಲ್ಲ...

Last Updated 27 ಮೇ 2014, 19:30 IST
ಅಕ್ಷರ ಗಾತ್ರ

ಕೇಂದ್ರದ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಪಾಲ್ಗೊಳ್ಳದೆ ಇರುವುದನ್ನು ‘ಮಹಾಪ್ರಮಾದ’ (ಪ್ರ.ವಾ.­ಸಂಪಾದಕೀಯ, ಮೇ 27) ಎಂದು ಪರಿಗಣಿಸುವುದು ಸೂಕ್ತವಲ್ಲ.

ನಮ್ಮ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ಸಂಬಂಧ ಸಮಾನ ನೆಲೆಯದ್ದು. ಕೇಂದ್ರದಿಂದ ಸಂವಿಧಾನಬದ್ಧ ಅನುದಾನ ಮತ್ತು  ಇತರ ಸೌಲಭ್ಯಗಳನ್ನು ಪಡೆಯುವುದು ಪ್ರತಿ ರಾಜ್ಯದ ಹಕ್ಕು. ಸೌಜನ್ಯದ ದೃಷ್ಟಿಯಿಂದ ಮಾತ್ರ ಈ ಸಮಾರಂಭದಲ್ಲಿ ಭಾಗವಹಿಸದಿರುವುದನ್ನು ಪ್ರಶ್ನಿಸಬಹುದು. ಆದರೆ ಕೇಂದ್ರದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರನ್ನು ಮೆಚ್ಚಿಸಿ   ಹೆಚ್ಚಿನ ಅನುದಾನ­ ನಿರೀಕ್ಷಿಸುವುದು ಸರಿಯಾದುದಲ್ಲ. ಇದು ಭೂಮಾಲೀಕ ಮತ್ತು ಗೇಣಿದಾರರ ನಡುವಣ ಸಂಬಂಧವನ್ನು ನೆನಪಿಸುತ್ತದೆ. ಇದು ಯಾವ ರಾಜ್ಯದ ಘನತೆಗೂ ತಕ್ಕುದಾದ ನಡವಳಿಕೆ­ಯಲ್ಲ.

ಹಾಗೆಂದೇ ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಒಡಿಶಾ ರಾಜ್ಯದ ಮುಖ್ಯಮಂತ್ರಿಗಳು   ತಮ್ಮ ಪೂರ್ವನಿರ್ಧರಿತ ಕಾರ್ಯಕ್ರಮಗಳತ್ತಲೇ ಗಮನಕೊಟ್ಟು ಈ ಸಮಾರಂಭದಲ್ಲಿ ಭಾಗವಹಿಸಲಿಲ್ಲ. ಈ ಹಿಂದೆ ಸ್ವತಃ ನರೇಂದ್ರ ಮೋದಿಯವರೇ ಕೇಂದ್ರದ ಇಂತಹ ಕಾರ್ಯಕ್ರಮಗಳಿಗೆ ಗೈರುಹಾಜರಾದ ಉದಾಹರಣೆಗಳಿವೆ. ಹೀಗಾಗಿ ಸಿದ್ದರಾಮಯ್ಯ ಕೇಂದ್ರದ ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸದೇ ಇರುವುದನ್ನು ಪ್ರಮಾದವೆಂದು ಪರಿಗಣಿಸಬೇಕಿಲ್ಲ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT