ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಕೀಯ ಪಕ್ಷಗಳ ದುಂದು ವೆಚ್ಚ

Last Updated 21 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಇತ್ತೀಚಿನ ವರ್ಷಗಳಲ್ಲಿ ರಾಜಕೀಯ ಪಕ್ಷಗಳು ಸಣ್ಣ ಕಾರ್ಯಕ್ರಮಗಳಿಗೂ ಬಂಟಿಂಗ್ಸ್, ಬ್ಯಾನರ್ಸ್‌, ಪೋಸ್ಟರ್, ಕಟೌಟ್‌ಗಳನ್ನು ಬಳಸುವುದು ಹೆಚ್ಚಾಗಿದೆ. ಇದಕ್ಕೆ ಭಾರೀ ಹಣ ಖರ್ಚಾಗುತ್ತದೆ. ರಾಜಕೀಯ ಪಕ್ಷಗಳಿಗೆ ಇಷ್ಟು ಹಣ ಎಲ್ಲಿಂದ ಬರುತ್ತದೆ?

ಕೆಲವು ರಾಜಕೀಯ ಮುಖಂಡರಂತೂ ರಸ್ತೆಗಳ ಮೂಲಕ ಓಡಾಡುವುದನ್ನೇ ನಿಲ್ಲಿಸಿದ್ದಾರೆ. ಸಣ್ಣ ಪುಟ್ಟ ಕಾರ್ಯಕ್ರಮಗಳಿಗೆ ಹೋಗಲು ಹೆಲಿಕಾಪ್ಟರ್ ಬಳಸುತ್ತಾರೆ.

ಹುಟ್ಟು ಹಬ್ಬ, ದೇವಸ್ಥಾನಗಳ ಭೇಟಿ, ಹೋಮ, ಪೂಜೆ ಇತ್ಯಾದಿಗಳನ್ನು ಮಾಡಿಸಲು ಲಕ್ಷಾಂತರ ರೂಪಾಯಿ ಖರ್ಚು ಮಾಡುತ್ತಾರೆ. ಇವರಿಗೆ ಇಷ್ಟೊಂದು ಹಣ ಎಲ್ಲಿಂದ ಬರುತ್ತದೆ?

 ದುಂದು ವೆಚ್ಚ ಮಾಡುತ್ತಿರುವ ರಾಜಕೀಯ ಮುಖಂಡರು ತಾವು ಮಹಾ ಪ್ರಾಮಾಣಿಕರು ಎಂದು ಹೇಳಿಕೊಳ್ಳುತ್ತಾರೆ. ಇಂಥವರ ನಡವಳಿಕೆಗಳನ್ನೂ ಜನರು ಗಮನಿಸಬೇಕು ಮತ್ತು ಸಕಾಲದಲ್ಲಿ ಅವರಿಗೆ ಪಾಠ ಕಲಿಸಬೇಕು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT