ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಧಮಾನ ಸಾಹಿತ್ಯ ಪ್ರಶಸ್ತಿ: ಕೃತಿಗಳಿಗೆ ಆಹ್ವಾನ

Last Updated 10 ಜನವರಿ 2013, 19:59 IST
ಅಕ್ಷರ ಗಾತ್ರ

ಕಳೆದ 32 ವರ್ಷಗಳಿಂದ ವರ್ಧಮಾನ ಸಾಹಿತ್ಯ ಪ್ರಶಸ್ತಿಗಳನ್ನು ನೀಡುತ್ತಾ ಬಂದಿರುವ ಮೂಡುಬಿದಿರೆಯ ವರ್ಧಮಾನ ಸಾಹಿತ್ಯ ಪ್ರಶಸ್ತಿ ಪೀಠವು ಈ ಬಾರಿಯ ಪ್ರಶಸ್ತಿಗಾಗಿ 2007ರಲ್ಲಿ ಪ್ರಥಮಾವೃತ್ತಿಯಾಗಿ ಪ್ರಕಟವಾದ ಕನ್ನಡ ಸಾಹಿತ್ಯದ ಯಾವುದೇ ಪ್ರಕಾರದ (ಕಾವ್ಯ, ಕಾದಂಬರಿ, ನಾಟಕ, ಸಣ್ಣಕತೆ, ವಿಮರ್ಶೆ ಇತ್ಯಾದಿ) ಸಾಹಿತ್ಯ ಕೃತಿಗಳನ್ನು ಪರಿಶೀಲನೆಗಾಗಿ ಆಹ್ವಾನಿಸಿದೆ.

ಪ್ರಶಸ್ತಿಯು ಗೌರವ ಸಂಭಾವನೆ, ಪ್ರಶಸ್ತಿ ಪತ್ರ, ಸನ್ಮಾನವನ್ನು ಒಳಗೊಂಡಿದ್ದು ವರ್ಧಮಾನ ಸಾಹಿತ್ಯ ಪ್ರಶಸ್ತಿಯು ಹಿರಿಯ ಸಾಹಿತಿಗಳ ಕೃತಿಗೆ ಮೀಸಲಿದ್ದರೆ, ವರ್ಧಮಾನ ಉದಯೋನ್ಮುಖ ಸಾಹಿತ್ಯ ಪ್ರಶಸ್ತಿಯು ತಮ್ಮ ಮೊದಲನೆಯ, ಎರಡನೆಯ ಇಲ್ಲವೇ ಮೂರನೆಯ ಕೃತಿಯ ಮೂಲಕ ಮಹತ್ವದ್ದನ್ನು ಸಾಧಿಸಿದ ಹೊಸ ಪೀಳಿಗೆಯ ಸಾಹಿತಿಗಳಿಗೆ. ಆಸಕ್ತರು ಮತ್ತು ಸಾಹಿತಿಗಳು ಕೃತಿಯ 3 ಪ್ರತಿಗಳನ್ನು ಕಳುಹಿಸಿ ನೆರವಾಗಬೇಕಾಗಿ ಕೋರಲಾಗಿದೆ. ಕೃತಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 15-2-2013.

ಸಂಪರ್ಕ ವಿಳಾಸ: ಮುನಿರಾಜ ರೆಂಜಾಳ, ಸಹ ನಿರ್ದೇಶಕರು, ವರ್ಧಮಾನ ಸಾಹಿತ್ಯ ಪ್ರಶಸ್ತಿ ಪೀಠ, ಜೆ. ಜೆ. ಕಾಲೇಜು, ಮೂಡುಬಿದಿರೆ, ದ. ಕ. - 574227. ದೂರವಾಣಿ - 94499 36232.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT