ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮ್ಮೇಳನ ಅಗತ್ಯ

Last Updated 23 ನವೆಂಬರ್ 2017, 19:30 IST
ಅಕ್ಷರ ಗಾತ್ರ

ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಮೂರು ವರ್ಷಕ್ಕೊಮ್ಮೆ ನಡೆಯಲಿಎಂದು ಸಲಹೆ ನೀಡಿದ್ದಾರೆ ಮುಖ್ಯಮಂತ್ರಿ ಚಂದ್ರು (ಪ್ರ.ವಾ., ನ.19). ಇದು ಸರಿಯಲ್ಲ. ಏಕೆಂದರೆ ಕನ್ನಡದ ಪುಸ್ತಕಗಳಿಗೆ ಮಾರುಕಟ್ಟೆಯೇ ಇಲ್ಲದೆ, ಪ್ರಕಟವಾದ ಪುಸ್ತಕಗಳನ್ನು ಖರ್ಚು ಮಾಡುವುದೇ ಸಮಸ್ಯೆಯಾಗಿ, ಲೇಖಕರು ಪುಸ್ತಕ ಪ್ರಕಟಿಸುವುದನ್ನೇ ನಿಲ್ಲಿಸುವ ಪರಿಸ್ಥಿತಿ ಉಂಟಾಗಿದೆ.

ಇನ್ನು ಅನೇಕ ಸಂದರ್ಭದಲ್ಲಿ ಒಳ್ಳೆಯ ಪುಸ್ತಕಗಳು ಲೇಖಕರಿಗೆ ಒಂದೇ ಕಡೆ ಲಭಿಸುವುದಿಲ್ಲ. ಕನ್ನಡ ಓದುಗರು ಅಂಥ ಪುಸ್ತಕಗಳಿಗಾಗಿ ಪರದಾಡುವ ಪರಿಸ್ಥಿತಿ ಇದೆ. ಈ ಸಮಸ್ಯೆಗಳ ನಿವಾರಣೆಗೆ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಪುಸ್ತಕ ಮಾರಾಟ ಮತ್ತು ಪ್ರದರ್ಶನದ ವ್ಯವಸ್ಥೆ ಒಳ್ಳೆಯ ಅವಕಾಶವಾಗಿದೆ. ಆದ್ದರಿಂದ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಮಾತ್ರವಲ್ಲ ಜಿಲ್ಲಾ ಮಟ್ಟದ ಸಾಹಿತ್ಯ ಸಮ್ಮೇಳನಗಳು ಕೂಡ ಪ್ರತಿ ವರ್ಷ ನಡೆಯಬೇಕು. ಆಗ ಮಾತ್ರ ಲೇಖಕ, ಪ್ರಕಾಶಕ ಮತ್ತು ಓದುಗರ ನಡುವೆ ಒಂದು ಸಂಬಂಧ ಏರ್ಪಡುತ್ತದೆ. ಓದುವ ಆಸಕ್ತಿಯೂ ಚಿಗುರಿ ಭಾಷೆ– ಸಂಸ್ಕೃತಿ ಜೀವ ತಳೆಯುತ್ತವೆ.

–ಹುರುಕಡ್ಲಿ ಶಿವಕುಮಾರ, ಹಗರಿಬೊಮ್ಮನಹಳ್ಳಿ

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT