ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕೋರ್ಸ್‌ಗಳಿಗೆ ಯುಜಿಸಿ ಮಾನ್ಯತೆ ರದ್ದಾಗಿರುವ ಸಮಸ್ಯೆಯನ್ನು ಇತ್ಯರ್ಥಗೊಳಿಸುವಲ್ಲಿ ಸಾಧಿಸಿರುವ ಪ್ರಗತಿಯ ಬಗ್ಗೆ ನಾಗರಿಕರಿಗೆ ಯಾವುದೇ ಮಾಹಿತಿ ತಿಳಿಯುತ್ತಿಲ್ಲ. ಸರ್ಕಾರದ ಮಟ್ಟದಲ್ಲಿ ಕೈಗೊಂಡಿರುವ ಕ್ರಮಗಳು ಎಷ್ಟರ ಮಟ್ಟಿಗೆ ಫಲ ನೀಡಿವೆ ಅಥವಾ ನೀಡಬಹುದು ಎನ್ನುವ ಬಗ್ಗೆಯೂ ಸುದ್ದಿಯಿಲ್ಲ. ಈ ನಡುವೆ ಕೆಲವು ವಿಶ್ವವಿದ್ಯಾಲಯಗಳಲ್ಲಿ ಇಲ್ಲಿಂದ ಪಡೆದಿರುವ ಪದವಿಗಳನ್ನು ಉನ್ನತ ಶಿಕ್ಷಣಕ್ಕೆ ಪರಿಗಣಿಸುತ್ತಿಲ್ಲ ಎಂಬ ಸುದ್ದಿ ಇದೆ.

ಈ ವಿಶ್ವವಿದ್ಯಾಲಯದ ಕೋರ್ಸ್‌ಗಳನ್ನು ಮಾಡುತ್ತಿದ್ದ ವಿದ್ಯಾರ್ಥಿಗಳು ಮುಂದೆ ಏನು ಮಾಡಬೇಕು? ಈ ಬಾರಿ ಪ್ರವೇಶ ಪ್ರಕ್ರಿಯೆ ಇಲ್ಲವೇ ಎಂಬ ಪ್ರಶ್ನೆಗಳಿಗೆ ಅಧಿಕಾರಿಗಳು ತಕ್ಷಣ ಸ್ಪಷ್ಟನೆ ನೀಡಬೇಕು. ಈ ವಿಚಾರದಲ್ಲಿ ನ್ಯಾಯಾಲಯದ ಮೊರೆ ಹೋಗುವುದು ವಿಳಂಬಕ್ಕೆ ಕಾರಣವಾಗಬಹುದು. ಆದ್ದರಿಂದ ವಿಶ್ವವಿದ್ಯಾಲಯವು ಸರ್ಕಾರದ ನೆರವು ಪಡೆದು ಯುಜಿಸಿ ಜೊತೆ ಸಕಾರಾತ್ಮವಾಗಿ ಸ್ಪಂದಿಸಿ, ಸಮಸ್ಯೆಯನ್ನು ಕೂಡಲೇ ಇತ್ಯರ್ಥಗೊಳಿಸಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.