ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಯು ಉಪನ್ಯಾಸಕರ ವರ್ಗಾವಣೆ: ಸುಗ್ರೀವಾಜ್ಞೆಗೆ ಆಗ್ರಹ

Published : 7 ಏಪ್ರಿಲ್ 2021, 21:14 IST
ಫಾಲೋ ಮಾಡಿ
Comments

ಬೆಂಗಳೂರು: ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ವರ್ಗಾವಣೆಗೂ ಸುಗ್ರೀವಾಜ್ಞೆ ಹೊರಡಿಸಬೇಕು. ಇಲ್ಲದೇ ಇದ್ದರೆ ಅನಿರ್ದಿಷ್ಟಾವಧಿ ಸತ್ಯಾಗ್ರಹ ನಡೆಸುವುದಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘ ಎಚ್ಚರಿಕೆ ನೀಡಿದೆ.

‘ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆಗೆ ರೂಪಿಸಿರುವ ಕಾಯ್ದೆ ತಿದ್ದುಪಡಿಗೆ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಸುಗ್ರೀವಾಜ್ಞೆಯ ಜೊತೆಗೆ ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆಗೂ ಸುಗ್ರೀವಾಜ್ಞೆ ಹೊರಡಿಸಬೇಕು. ಇಲ್ಲವಾದರೆ ಸರ್ಕಾರದ ವರ್ಗಾವಣೆ ವಿರೋಧಿ ನಿಲುವು ಖಂಡಿಸಿ ಸತ್ಯಾಗ್ರಹ ಹಮ್ಮಿಕೊಳ್ಳುವುದು ಅನಿವಾರ್ಯವಾಗಲಿದೆ’ ಎಂದು ಎಂದು ಸಂಘದ ಅಧ್ಯಕ್ಷ ಎ.ಎಚ್.ನಿಂಗೇಗೌಡ ತಿಳಿಸಿದ್ದಾರೆ.

2020-21ನೇ ಸಾಲಿನ ಸರ್ಕಾರಿ ಪಿಯು ಕಾಲೇಜುಗಳ ಉಪನ್ಯಾಸಕರ ವೃಂದದ ವರ್ಗಾವಣೆ ಪ್ರಕ್ರಿಯೆಯನ್ನು ಆರಂಭಿಸುವ ಮೊದಲು ಈಗಾಗಲೇ ಅಸ್ತಿತ್ವದಲ್ಲಿರುವ ಪಿಯು ಉಪನ್ಯಾಸಕರ ವರ್ಗಾವಣೆ ಕಾಯ್ದೆ ರದ್ದುಪಡಿಸಿ, ಪಾರದರ್ಶಕ ಹಾಗೂ ವೈಜ್ಞಾನಿಕವಾಗಿ ಕಾಯ್ದೆ ರೂಪಿಸುವಂತೆ ಸರ್ಕಾರಕ್ಕೆ ಹಾಗೂ ಪಿಯು ಇಲಾಖೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ.

ಹೊಸ ಕಾಯ್ದೆಯ ಕರಡು ಸಿದ್ಧವಾಗಿದ್ದರೂ ಬಜೆಟ್ ಅಧಿವೇಶನದಲ್ಲಿ ಮಂಡನೆಯಾಗಿಲ್ಲ. ಹೀಗಾಗಿ, ಹಲವು ವರ್ಷಗಳಿಂದ ವರ್ಗಾವಣೆಗಾಗಿ ಕಾಯುತ್ತಿರುವ ಉಪನ್ಯಾಸಕರಿಗೆ ನಿರಾಸೆಯಾಗಿದೆ. ಉಪನ್ಯಾಸಕರ ವರ್ಗಾವಣೆಯನ್ನು ಸರ್ಕಾರ ಪದೇ ಪದೇ ನಿರ್ಲಕ್ಷಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT