ಎಂಬಿಬಿಎಸ್ ಕೋರ್ಸ್‍ಗೆ ಅವಕಾಶ

6

ಎಂಬಿಬಿಎಸ್ ಕೋರ್ಸ್‍ಗೆ ಅವಕಾಶ

Published:
Updated:

ಬೆಂಗಳೂರು: ‘ಉತ್ತರ ಅಮೆರಿಕದ ಬಾರ್ಬಡೋಸ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಎಂಬಿಬಿಎಸ್ ಕೋರ್ಸ್ ಮಾಡಲಿಚ್ಛಿಸುವ ಭಾರತದ ವಿದ್ಯಾರ್ಥಿಗಳಿಗೆ ಅವಕಾಶ ನೀಡಲಾಗುತ್ತದೆ’ ಎಂದು ಉತ್ತರ ಅಮೆರಿಕದ ಬ್ರಿಡ್ಜ್ ಟೌನ್ ಇಂಟರ್‍ನ್ಯಾಷನಲ್ ವಿಶ್ವವಿದ್ಯಾಲಯದ ಉಪಕುಲಪತಿ ರೊನಾಲ್ಡ್ ಜೋನ್ಸ್‌ ತಿಳಿಸಿದರು.

ಬಾರ್ಬಡೋಸ್ ವಿಶ್ವವಿದ್ಯಾಲಯಕ್ಕೆ ದಾಖಲಾಗಿರುವ ಭಾರತೀಯ ವೈದ್ಯಕೀಯ ಶಿಕ್ಷಣಾರ್ಥಿಗಳಿಗಾಗಿ ಗುರುವಾರ ನಗರದಲ್ಲಿ ಏರ್ಪಡಿಸಿದ್ದ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವಿವಿಧ ದೇಶಗಳ ವಿದ್ಯಾರ್ಥಿಗಳು ಅಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹಾಗೆಯೇ ಭಾರತದ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಿಕೊಡಲಾಗಿದ್ದು, ಅದರ ಪ್ರಯೋಜನ ಪಡೆದುಕೊಳ್ಳಬೇಕು’ ಎಂದು ಮನವಿ ಮಾಡಿದರು.

Tags: 

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !