ಪಾಕ್‌ ಸೇನಾ ಬಲ ಕುಂದುವುದಿಲ್ಲ

ಶುಕ್ರವಾರ, ಜೂನ್ 21, 2019
24 °C
ಸೇನಾ ಮುಖ್ಯಸ್ಥ ಖಮರ್‌ ಜಾವೇದ್‌ ಹೇಳಿಕೆ

ಪಾಕ್‌ ಸೇನಾ ಬಲ ಕುಂದುವುದಿಲ್ಲ

Published:
Updated:
Prajavani

ಇಸ್ಲಾಮಾಬಾದ್‌ (ಪಿಟಿಐ): ’ರಕ್ಷಣಾ ವೆಚ್ಚ ಕಡಿತಗೊಳಿಸುವುದರಿಂದ ಸೇನಾ ಸಾಮರ್ಥ್ಯದ ಮೇಲೆ ಯಾವುದೇ ರೀತಿ ಪರಿಣಾಮ ಬೀರುವುದಿಲ್ಲ’ ಎಂದು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್‌ ಖಮರ್‌ ಜಾವೇದ್‌ ಬಜ್ವಾ ಹೇಳಿದ್ದಾರೆ.

ಗಡಿ ನಿಯಂತ್ರಣ ರೇಖೆಯಲ್ಲಿ ಯೋಧರೊಂದಿಗೆ ಈದ್‌–ಉಲ್‌–ಫಿತ್ರ್‌ ಆಚರಿಸಿದ ಅವರು, ಪಾಕಿಸ್ತಾನ ಸೇನೆ ಸ್ವಯಂ ಪ್ರೇರಿತವಾಗಿ ಮುಂದಿನ ಹಣಕಾಸು ವರ್ಷದಲ್ಲಿ ಬಜೆಟ್‌ನಲ್ಲಿ ರಕ್ಷಣಾ ವೆಚ್ಚ ಕಡಿತಗೊಳಿಸಲು ಮುಂದಾಗಿರುವ ಬಗ್ಗೆ ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ.

’ಯೋಧರ ಜೀವನದ ಗುಣಮಟ್ಟದ ವಿಷಯದಲ್ಲೂ ರಾಜಿ ಮಾಡಿಕೊಂಡಿಲ್ಲ.  ಅಧಿಕಾರಿಗಳ ವೇತನವನ್ನು ಹೆಚ್ಚಿಸದಿರಲು ಮಾತ್ರ ನಿರ್ಧಾರ ಕೈಗೊಳ್ಳಲಾಗಿದೆ. ಯೋಧರ ವೇತನವನ್ನು ಎಂದಿನಂತೆಯೇ ಹೆಚ್ಚಿಸಲಾಗುವುದು. ಕೆಲವು ವೆಚ್ಚಗಳನ್ನು ಕಡಿಮೆಗೊಳಿಸುವ ಮೂಲಕ ಹಣಕಾಸು ಕೊರತೆಯನ್ನು ನೀಗಿಸಲಾಗುವುದು’ ಎಂದು ತಿಳಿಸಿದ್ದಾರೆ.

ದೇಶವು ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ಪಾಕಿಸ್ತಾನ ಸೇನೆ ಸ್ವಯಂ ಪ್ರೇರಿತವಾಗಿ ರಕ್ಷಣಾ ವೆಚ್ಚ ಕಡಿತಗೊಳಿಸಲು ಮುಂದಾಗಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !