ಷರೀಫ್ ಶಿಕ್ಷೆ ರದ್ದತಿ ಪ್ರಶ್ನಿಸಿದ್ದ ಅರ್ಜಿ ವಜಾ

7
ಇಸ್ಲಾಮಾಬಾದ್ ಹೈಕೋರ್ಟ್ ಆದೇಶ ಎತ್ತಿಹಿಡಿದ ಸುಪ್ರೀಂಕೋರ್ಟ್

ಷರೀಫ್ ಶಿಕ್ಷೆ ರದ್ದತಿ ಪ್ರಶ್ನಿಸಿದ್ದ ಅರ್ಜಿ ವಜಾ

Published:
Updated:

ಇಸ್ಲಾಮಾಬಾದ್: ಅವೆನ್‌ಫೀಲ್ಡ್ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್‌ಗೆ ನೀಡಿದ್ದ ಶಿಕ್ಷೆ ರದ್ದುಗೊಳಿಸಿರುವುದನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

2018ರ ಜುಲೈನಲ್ಲಿ ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಷರೀಫ್‌ಗೆ 10 ವರ್ಷ ಶಿಕ್ಷೆ ವಿಧಿಸಲಾಗಿತ್ತು. ಲಂಡನ್‌ನಲ್ಲಿ ನಾಲ್ಕು ವಿಲಾಸಿ ಫ್ಲಾಟ್ ಖರೀದಿಸಿದ ಆರೋಪ ಹೊತ್ತಿರುವ ಷರೀಫ್, ಮಗಳು ಮರಿಯಮ್, ಅಳಿಯ  ಮೊಹಮ್ಮದ್ ಸಫ್ದಾರ್ ವಿರುದ್ಧದ ಶಿಕ್ಷೆಯನ್ನು ಇಸ್ಲಾಮಾಬಾದ್ ಹೈಕೋರ್ಟ್ ರದ್ದುಗೊಳಿಸಿತ್ತು. 

ಶಿಕ್ಷೆ ರದ್ದು ಪ್ರಶ್ನಿಸಿ ಪಾಕಿಸ್ತಾನದ ಭ್ರಷ್ಟಾಚಾರ ನಿಗ್ರಹ ದಳ ನ್ಯಾಷನಲ್ ಅಕೌಂಟಬಿಲಿಟಿ ಬ್ಯೂರೊ (ಎನ್‌ಎಬಿ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಸಕಿಬ್ ನಿಸಾರ್ ಅವರ ನೇತೃತ್ವದ ಐವರು ನ್ಯಾಯಮೂರ್ತಿಗಳ ಪೀಠ ಸೋಮವಾರ ವಜಾಗೊಳಿಸಿತು. 

ತನ್ನ ವಾದ ಮಂಡಿಸುವಲ್ಲಿ ಎನ್‌ಎಬಿ ವಿಫಲವಾಗಿದೆ ಎಂದು ಪೀಠ ತಿಳಿಸಿತು. ಇಸ್ಲಾಮಾಬಾದ್ ಹೈಕೋರ್ಟ್ ಈ ಪ್ರಕರಣದಲ್ಲಿ ತನ್ನ ಅಧಿಕಾರ ಮೀರಿ ಆದೇಶ ನೀಡಿಲ್ಲ ಎಂದೂ ಸ್ಪಷ್ಟಪಡಿಸಿತು. 

ಸ್ಟೀಲ್‌ಮಿಲ್ಸ್ ಭ್ರಷ್ಟಾಚಾರ ಪ್ರಕರಣದಲ್ಲಿ ಷರೀಫ್ ಅವರು ಸದ್ಯ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !