ಶುಕ್ರವಾರ, ಫೆಬ್ರವರಿ 28, 2020
19 °C
ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನಕ್ಕೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ತಿರುಗೇಟು

ರಕ್ತಪಾತ ನಡೆಸುವ ದೇಶದೊಂದಿಗೆ ಮಾತುಕತೆ ಸಾಧ್ಯವೇ: ಸುಷ್ಮಾ ಪ್ರಶ್ನೆ

ಪಿಟಿಐ Updated:

ಅಕ್ಷರ ಗಾತ್ರ : | |

Deccan Herald

ವಿಶ್ವಸಂಸ್ಥೆ: ‘ಕೊಲೆಗಾರರನ್ನು ವೈಭವೀಕರಿಸುವ ಮತ್ತು ಭಯೋತ್ಪಾದಕ ದಾಳಿ ಮೂಲಕ ರಕ್ತಪಾತ ನಡೆಸುವ ದೇಶದೊಂದಿಗೆ ಮಾತುಕತೆ ಸಾಧ್ಯವೇ’ ಎಂದು ಪ್ರಶ್ನಿಸುವ ಮೂಲಕ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌ ಪಾಕಿಸ್ತಾನಕ್ಕೆ ಚಾಟಿ ಬೀಸಿದ್ದಾರೆ.

ವಿಶ್ವಸಂಸ್ಥೆ ಸಾಮಾನ್ಯ ಸಭೆಯ 73ನೇ ಅಧಿವೇಶನದಲ್ಲಿ ಮಾತನಾಡಿದ ಅವರು, ‘ಶಾಂತಿ ಮಾತುಕತೆಗೆ ಭಾರತ ಒಪ್ಪುತ್ತಿಲ್ಲ ಎಂದು ಪಾಕಿಸ್ತಾನ ಸುಳ್ಳು ಹೇಳುತ್ತಿದೆ.  ಆ ದೇಶ ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಕಾರಣದಿಂದಲೇ ನಾವು ಮಾತುಕತೆಯ ಪ್ರಯತ್ನಗಳನ್ನು ಸ್ಥಗಿತಗೊಳಿಸಿದ್ದೇವೆ’ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮಹಮೂದ್‌ ಖುರೇಷಿ ಅವರಿಗೆ ತಿರುಗೇಟು ನೀಡಿದ್ದಾರೆ.

‘ವಿಶ್ವಸಂಸ್ಥೆ ಸಾಮಾನ್ಯ ಸಭೆಗೂ ಮುನ್ನ, ಉಭಯ ದೇಶಗಳ ವಿದೇಶಾಂಗ ಸಚಿವರ ಸಭೆ ನಡೆಸಲು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು. ಭಾರತ ಈ ಪ್ರಸ್ತಾವವನ್ನು ಒಪ್ಪಿದ ಕೆಲವೇ ಗಂಟೆಗಳಲ್ಲಿ ಉಗ್ರರು ಭಾರತೀಯ ಯೋಧರನ್ನು ಹತ್ಯೆಮಾಡಿದ ಸುದ್ದಿ ಬಂತು. ಪರಿಸ್ಥಿತಿ ಹೀಗಿರುವಾಗ ಮಾತುಕತೆ ನಡೆಸಲು ಸಾಧ್ಯವೇ’ ಎಂದು ಅವರು
ಪ್ರಶ್ನಿಸಿದರು. 

‘ಪಾಕಿಸ್ತಾನವು ಭಯೋತ್ಪಾದನೆಯನ್ನೇ ತನ್ನ ರಾಜಕೀಯ ನೀತಿಯನ್ನಾಗಿಸಿಕೊಂಡಿದೆ’ ಎಂದೂ ಟೀಕಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು