ಪಾಕಿಸ್ತಾನ ‘ರೋಗ್‌’ ರಾಷ್ಟ್ರ: ಗೃಹ ಸಚಿವ

ಬುಧವಾರ, ಮೇ 22, 2019
24 °C

ಪಾಕಿಸ್ತಾನ ‘ರೋಗ್‌’ ರಾಷ್ಟ್ರ: ಗೃಹ ಸಚಿವ

Published:
Updated:

ವಿಜಯಪುರ: ‘ಪಾಕಿಸ್ತಾನವು ‘ರೋಗ್‌‘ (ದುರುಳ) ರಾಷ್ಟ್ರ. ಭಯೋತ್ಪಾದಕ ರಾಷ್ಟ್ರ. ಆ ದೇಶದ ನಡೆ ಖಂಡನಾರ್ಹ’ ಎಂದು ಗೃಹ ಸಚಿವ ಎಂ.ಬಿ.ಪಾಟೀಲ ಮಂಗಳವಾರ ಇಲ್ಲಿ ಟೀಕಿಸಿದರು.

‘ಕಾಶ್ಮೀರದಲ್ಲಿ ಪಾಕಿಸ್ತಾನ ನಡೆಸಿದ ಹೇಯಕೃತ್ಯವನ್ನು ಪಕ್ಷಾತೀತವಾಗಿ ಖಂಡಿಸಬೇಕು. ರಾಜಕೀಯ ಭಿನ್ನಾಭಿಪ್ರಾಯ ಬದಿಗೊತ್ತಿ, ಪ್ರಧಾನಿಗೆ ಶಕ್ತಿ ತುಂಬಬೇಕು. ಇದರಲ್ಲಿ ಯಾರೊಬ್ಬರೂ ರಾಜಕಾರಣ ಮಾಡಬಾರದು. ಪಾಕಿಸ್ತಾನವನ್ನು ಒಂಟಿಯಾಗಿ ಮಾಡುವುದೇ ನಮ್ಮೆಲ್ಲರ ಗುರಿಯಾಗಬೇಕು’ ಎಂದು ಹೇಳಿದರು.

ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನ ಬೆಂಬಲಿಸುವವರ ವಿರುದ್ಧ ಕಾನೂನುಕ್ರಮ ಜರುಗಿಸುವಂತೆ ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದಾಗಿ ಅವರು ಸುದ್ದಿಗಾರರಿಗೆ ತಿಳಿಸಿದರು.

‘ಕಳ್ಳರು, ದುಷ್ಕರ್ಮಿಗಳು, ಆತಂಕವಾದಿಗಳಿಗೆ ಜಾತಿ, ಧರ್ಮವಿಲ್ಲ. ಇವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿರುವೆ. ಶಾಸಕರು, ಸಚಿವರು ಪೊಲೀಸ್ ಇಲಾಖೆಯ ಕಾರ್ಯವೈಖರಿಯಲ್ಲಿ ಹಸ್ತಕ್ಷೇಪ ಮಾಡಲು ಅವಕಾಶ ನೀಡಲ್ಲ’ ಎಂದು ಪಾಟೀಲ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !