ತೊಂಡೇಬಾವಿ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

7

ತೊಂಡೇಬಾವಿ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Published:
Updated:
Deccan Herald

ಗೌರಿಬಿದನೂರು: ತಾಲ್ಲೂಕಿನ ತೊಂಡೇಬಾವಿ ಗ್ರಾಮ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ನಾಗರತ್ನಮ್ಮ ಹಾಗೂ ಉಪಾಧ್ಯಕ್ಷರಾಗಿ ಯಶೋದಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಎಸ್.ಎನ್.ಮಂಜುನಾಥ್ ಚುನಾವಣಾಧಿಕಾರಿಯಾಗಿದ್ದರು.

ನಾಗರತ್ನಮ್ನ ಮಾತನಾಡಿ, ‘ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿನ ಜನರ ಸಮಸ್ಯೆಗಳ ಬಗ್ಗೆ ಅರಿತು ಶೀಘ್ರದಲ್ಲೇ ‌ಪರಿಹಾರಕ್ಕೆ ಕೈಗೊಳ್ಳುತ್ತೇವೆ. ಸ್ವಚ್ಛತೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಕುರಿತು ಸ್ಥಳೀಯರಿಂದ ಮಾಹಿತಿ ಪಡೆದು  ಬಗೆಹರಿಸಲಾಗುವುದು’ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ‌ಸದಸ್ಯ ಜೆ.ಕಾಂತರಾಜು ಮಾತನಾಡಿ, ‘ಪಂಚಾಯಿತಿ ವ್ಯಾಪ್ತಿಯಲ್ಲಿ ಈಗಾಗಲೇ ಸಾಕಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ಕೆಲವು ಗ್ರಾಮಗಳಲ್ಲಿ ಇತ್ತೀಚೆಗೆ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ದೂರು ಬಂದಿದೆ. ಶೀಘ್ರದಲ್ಲೇ ಕೊಳವೆ ಬಾವಿ ಕೊರೆಯಿಸಿ ಪರಿಹಾರ ಕಲ್ಪಿಸಲಾಗುವುದು’ ಎಂದರು.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಪಿ.ಎನ್.ಶಿವಶಂಕರರೆಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯ ಟಿ.ಕೆ.ಶ್ರೀನಿವಾಸಗೌಡ, ಮಾಜಿ ತಾಲ್ಲೂಕು ಪಂಚಾಯಿತಿ ಸದಸ್ಯ ಕೆ.ವಿ‌.ಶ್ರೀನಿವಾಸ್, ಪಿಡಿಒ ಬಸವರಾಜ್, ಮುಖಂಡರಾದ ಶಿವಯ್ಯ, ಟಿ.ವಿ.ವಿಜಯಕುಮಾರ್, ನಾಗರಾಜ್, ಬಿ.ಪಿ.ಅಶ್ವತ್ಥನಾರಾಯಣಗೌಡ, ಆರ್.ಎನ್.ವೆಂಕಟೇಶ್ ರೆಡ್ಡಿ, ಬಿ.ಎನ್.ರಂಗಪ್ಪ, ಉಮೇಶ್ ಬಾಬು, ನಾಗಾರ್ಜುನ್, ಮಂಜುನಾಥ್, ಪುಷ್ಪಲತಾ, ಸವಿತಾಬಾಯಿ, ಜಯಮ್ಮ, ನರಸಮ್ಮ, ನಾಗರಾಜು, ಷಫಿ, ರಾಮಾಂಜಿ, ಮೈಲಾರಪ್ಪ, ವೆಂಕಟಲಕ್ಷ್ಮಮ್ಮ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !