ಬಾಲಕಿ ಮೇಲೆ ಅತ್ಯಾಚಾರ

ಮಂಗಳವಾರ, ಜೂನ್ 25, 2019
30 °C
ಸಂತ್ರಸ್ತೆ, ಆರೋಪಿಯ ಒಟ್ಟಿಗೆ ಕರೆದೊಯ್ದ ಪೊಲೀಸರು

ಬಾಲಕಿ ಮೇಲೆ ಅತ್ಯಾಚಾರ

Published:
Updated:

ಡೆಹ್ರಾಡೂನ್‌ (ಪಿಟಿಐ): ಒಂಬತ್ತು ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು ಆರೋಪಿ ಜೊತೆಯಲ್ಲೇ ಒಂದೇ ಪೊಲೀಸ್‌ ವಾಹನದಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸುವ ಸಲುವಾಗಿ ಕರೆದುಕೊಂಡು ಹೋಗಿರುವುದು ಇಲ್ಲಿ ನಡೆದಿದೆ.

‘ನಮ್ಮ ಮಗಳನ್ನು ಗುರುವಾರ ಡೂನ್‌ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆಸ್ಪತ್ರೆಯಲ್ಲಿ ಸರಿಯಾದ ಚಿಕಿತ್ಸೆಯನ್ನೂ ನೀಡದೆ, ಹೇಳಿಕೆ ದಾಖಲಿಸಲು ಅದೇ ದಿನವೇ ಕರೆದುಕೊಂಡು ಹೋದರು’ ಎಂದು ಸಂತ್ರಸ್ತೆಯ ಪೋಷಕರು ದೂರಿದ್ದಾರೆ. 

ಆರೋಪಿ ಜೊತೆಗೆ ಒಂದೇ ವಾಹನದಲ್ಲಿ ಕರೆದುಕೊಂಡು ಹೋಗಿರುವುದರಿಂದ ಆಕೆ ಮಾನಸಿಕ ಹಿಂಸೆಗೆ ಒಳಗಾಗಿದ್ದಾಳೆ. ಆದ್ದರಿಂದಲೇ ನ್ಯಾಯಾಧೀಶರ ಮುಂದೆ ಸರಿಯಾದ ಹೇಳಿಕೆ ನೀಡಲು ಸಾಧ್ಯವಾಗಿಲ್ಲ ಎಂದು ಪೋಷಕರು ಹೇಳಿದ್ದಾರೆ.

ಆರೋಗ್ಯ ಹೆಚ್ಚು ಹದಗೆಟ್ಟ ಪರಿಣಾಮ ಮಗಳನ್ನು ಮಸ್ಸೂರಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಇಲ್ಲಿಂದ ಮತ್ತೆ ಡೂನ್‌ ವೈದ್ಯಕೀಯ ಕಾಲೇಜಿಗೆ ಕಳುಹಿಸಲಾಗಿದೆ. ಈಗ ಆಕೆ ಅಲ್ಲಿನ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ತಿಳಿಸಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ತೆಹರಿ ಜಿಲ್ಲೆಯ ಒಂಬತ್ತು ವರ್ಷದ ಹುಡುಗಿಯ ಮೇಲೆ ಅದೇ ಹಳ್ಳಿಯ ಮೇಲ್ವರ್ಗದ ವ್ಯಕ್ತಿ ಕಳೆದ ವಾರ ಅತ್ಯಾಚಾರ ಎಸಗಿದ್ದ.

ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಜೈಪುರ (ಪಿಟಿಐ): ವಿವಾಹಿತ ಮಹಿಳೆ (30) ಮೇಲೆ ಐದು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಕೃತ್ಯದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ ಘಟನೆ ಪಾಲಿ ಜಿಲ್ಲೆಯಲ್ಲಿ ನಡೆದಿದೆ.  ಮೇ 26 ರಂದು ನನ್ನ ಸ್ನೇಹಿತೆಯೊಂದಿಗೆ ದೇವಸ್ಥಾನಕ್ಕೆ ಹೋಗುವಾಗ ನನ್ನ ಮೇಲೆ ಐದು ಮಂದಿ ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆ ಭಾನುವಾರ ಪೊಲೀಸರಿಗೆ ದೂರು ನೀಡಿದ್ದರು.‌  ಐವರಲ್ಲಿ ನಾಲ್ಕು ಆರೋಪಿಗಳನ್ನು ಸೋಮವಾರ ಬಂಧಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದರು.

 

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 3

  Angry

Comments:

0 comments

Write the first review for this !