ಅಂಬೇಡ್ಕರ್ ಮಹಾನ್‌ ದೇಶ ಭಕ್ತ: ಸಂಸದ

7
ಜಿಲ್ಲಾಡಳಿತದಿಂದ 62ನೇ ಪರಿನಿರ್ವಾಣ ದಿನಾಚರಣೆ

ಅಂಬೇಡ್ಕರ್ ಮಹಾನ್‌ ದೇಶ ಭಕ್ತ: ಸಂಸದ

Published:
Updated:
Deccan Herald

ಚಾಮರಾಜನಗರ: ದೇಶದ ಶೋಷಿತ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಸಂವಿಧಾನ ರೂಪಿಸಿದ ಡಾ.ಬಿ.ಆರ್. ಅಂಬೇಡ್ಕರ್‌ ಅವರು ಮಹಾನ್‌ ದೇಶ ಭಕ್ತರು ಎಂದು ಸಂಸದ ಆರ್.ಧ್ರುವನಾರಾಯಣ ಗುರುವಾರ ಹೇಳಿದರು.

ನಗರದ ಜೆ.ಎಚ್‌.ಪಟೇಲ್‌ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್‌ ಅವರ 62ನೇ ಪರಿನಿರ್ವಾಣ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಭಾರತ ಸಾಮಾಜಿಕ, ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಅದಕ್ಕೆ ಸಂವಿಧಾನವೇ ಕಾರಣ. ಈ ಮೂಲಕ ದೇಶಕ್ಕೆ ಅಪಾರ ಕೊಡುಗೆ ನೀಡಿದ ಕೀರ್ತಿ ಅಂಬೇಡ್ಕರ್‌ ಅವರಿಗೆ ಸಲ್ಲುತ್ತದೆ. ಬಡಜನರಿಗೆ ಅತ್ಯಂತ ಅನುಕೂಲವಾಗುವಂತಹ ಅವಕಾಶಗಳನ್ನು ಸಂವಿಧಾನ ನೀಡಿದೆ ಎಂದು ಹೇಳಿದರು.

ವಿಶ್ವಸಂಸ್ಥೆ ಕೂಡ ಪರಿನಿರ್ವಾಣ ದಿನವನ್ನು ಆಚರಿಸುತ್ತದೆ. ಕೊಲಂಬಿಯಾದಲ್ಲಿ ಅವರ ಹೆಸರಿನ ಅಧ್ಯಯನ ಪೀಠವನ್ನೇ ಆರಂಭ ಮಾಡಿ ಗೌರವ ಸಲ್ಲಿಸಿದೆ ಎಂದರು.

ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮಾತನಾಡಿ, ‘ಅಂಬೇಡ್ಕರ್‌ ಅವರು ದೇಶಕ್ಕೆ ನೀಡಿರುವ ಕೊಡುಗೆಗಳನ್ನು ಸ್ಮರಿಸಬೇಕು. ಅವರು ಜಾತ್ಯತೀತ ರಾಷ್ಟ್ರ ನಿರ್ಮಾಣಕ್ಕೆ ಪಣತೊಟ್ಟವರು. ಶಿಕ್ಷಣ, ಸಂಘಟನೆ, ಹೋರಾಟ... ಈ ಮೂರು ವಿಚಾರ ಅವರ ಮಂತ್ರವಾಗಿತ್ತು. ಸಂವಿಧಾನದ ಆಶಯಗಳನ್ನು ಪ್ರತಿಯೊಬ್ಬರು ಅರ್ಥೈಸಿಕೊಂಡು ಅದನ್ನು ಜೀವನದಲ್ಲಿ ಅನುಸರಿಸಬೇಕು’ ಎಂದು ಸಲಹೆ ನೀಡಿದರು.

ಜನಪದ ಕಲಾವಿದ ಸಿ.ಎಂ.ನರಸಿಂಹಮೂರ್ತಿ ಭೀಮ ನಮನ ಸಲ್ಲಿಸಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ, ಸದಸ್ಯರಾದ ಆರ್.ಬಾಲರಾಜು, ಸದಾಶಿವ ಮೂರ್ತಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್ ಕುಮಾರ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದೊಡ್ಡಮ್ಮ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗೀತಾ ಪ್ರಸನ್ನ, ಸಮಾಜ ಕಲ್ಯಾಣ ಇಲಾಖೆಯ ಪ್ರಭಾರ ಉಪ ನಿರ್ದೇಶಕ ಎಂ.ತಿರುಮಲೇಶ ಹಾಗೂ ವಿವಿಧ ಸಂಘಟನೆಗಳ ಮುಖಂಡರು ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !