ಖಜಾನೆಯಿಂದ ವೇತನ ಪಾವತಿಸಿ

7

ಖಜಾನೆಯಿಂದ ವೇತನ ಪಾವತಿಸಿ

Published:
Updated:
ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಆನೇಕಲ್‌ ತಾಲ್ಲೂಕು ಪಂಚಾಯಿತಿ ಬಳಿ ಪ್ರತಿಭಟನೆ ನಡೆಸಲಾಯಿತು

ಆನೇಕಲ್: ಸರ್ಕಾರದ ಖಜಾನೆಯಿಂದ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ವತಿಯಿಂದ ಬುಧವಾರ ತಾಲ್ಲೂಕು ಪಂಚಾಯಿತಿ ಬಳಿ ಪ್ರತಿಭಟನೆ ನಡೆಸಲಾಯಿತು.

ಸರ್ಕಾರದ ಆದೇಶದಂತೆ ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ನೌಕರರಿಗೆ ಇಎಫ್‌ಎಂಎಸ್‌ ಮೂಲಕ ವೇತನ ಪಾವತಿ ಮಾಡಬೇಕು. ಎಸ್‌ಎಸ್‌ಎಲ್‌ಸಿ ಪಾಸಾಗಿರುವ 10 ವರ್ಷ ಸೇವೆ ಸಲ್ಲಿಸಿರುವ ಕರ ವಸೂಲಿಗಾರರಿಗೆ ಗ್ರೇಡ್‌ 2 ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಬೇಕು ಎಂದು ಒತ್ತಾಯಿಸಲಾಗಿದೆ.

ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಕರ ವಸೂಲಿಗಾರರ ಹುದ್ದೆಗೆ ಪಂಚಾಯಿತಿಯಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮುಂಬಡ್ತಿ ನೀಡಬೇಕು. ಎಂ.ಎಸ್. ಸ್ವಾಮಿ ಅವರ ವರದಿಯನ್ನು ಜಾರಿಗೆ ತರಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಸಿಐಟಿಯು ತಾಲ್ಲೂಕು ಅಧ್ಯಕ್ಷ ಮಹದೇಶ್, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಗ್ರಾಮ ಪಂಚಾಯಿತಿ ನೌಕರರ ಸಂಘದ ಗೌರವ ಅಧ್ಯಕ್ಷ ಎಂ.ರಾಮಯ್ಯ, ಅಧ್ಯಕ್ಷ ಅಶೋಕ್, ಉಪಾಧ್ಯಕ್ಷ ಸಂಪಂಗಿ ರಾಜಪ್ಪ, ಪದಾಧಿಕಾರಿಗಳಾದ ವೀರಪ್ಪ, ನಾರಾಯಣಪ್ಪ ಹಾಜರಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !