ಬರ ನಿರ್ವಹಣಾ ಸಭೆ: ‘ಟ್ಯಾಂಕರ್ ಬಿಲ್ ಪಾವತಿ ಬಾಕಿ ಉಳಿಸಿಕೊಂಡರೆ ಕ್ರಮ’

ಗುರುವಾರ , ಮೇ 23, 2019
29 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆ

ಬರ ನಿರ್ವಹಣಾ ಸಭೆ: ‘ಟ್ಯಾಂಕರ್ ಬಿಲ್ ಪಾವತಿ ಬಾಕಿ ಉಳಿಸಿಕೊಂಡರೆ ಕ್ರಮ’

Published:
Updated:
Prajavani

ವಿಜಯಪುರ: ‘ಬರಗಾಲ ಕಾಮಗಾರಿ ನಿರ್ವಹಣೆಗೆ ಯಾವುದೇ ನೆಪವೊಡ್ಡದೆ, ಸಮರ್ಪಕವಾಗಿ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಿ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹಮ್ಮದ್‌ ಮೊಹಸೀನ್ ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ನಡೆದ ಬರ ಕುರಿತ ನಿರ್ವಹಣಾ ಸಭೆಯಲ್ಲಿ ಮಾತನಾಡಿದ ಅವರು, ‘ಬರ ನಿರ್ವಹಣೆ ಹಾಗೂ ಕುಡಿಯುವ ನೀರು ಪೂರೈಕೆಗೆ ಯಾವುದೇ ಅನುದಾನದ ಕೊರತೆ ಇಲ್ಲ. ಅಧಿಕಾರಿಗಳು ನಿರ್ಲಕ್ಷ್ಯ ತೋರದೆ, ಬರಗಾಲ ಕಾಮಗಾರಿಗಳನ್ನು ಕೈಗೊಳ್ಳಬೇಕು. ನೀರಿನ ಅವಶ್ಯಕತೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು’ ಎಂದರು.

‘ಬರ ಕಾಮಗಾರಿ ಸೇರಿದಂತೆ ಕುಡಿಯುವ ನೀರಿನ ಪೂರೈಕೆಯ ಬಿಲ್ಲುಗಳನ್ನು ಯಾವುದೇ ಕಾರಣಕ್ಕೂ ಬಾಕಿ ಉಳಿಸಿಕೊಳ್ಳಬಾರದು. ತಾಲ್ಲೂಕುವಾರು ಟ್ಯಾಂಕರ್‌ಗಳಿಂದ ನೀರು ಪೂರೈಕೆಯ ಬಿಲ್ಲುಗಳನ್ನು 7 ದಿನದೊಳಗಾಗಿ ಪಾವತಿಸಬೇಕು. ಒಂದು ವೇಳೆ ಬಿಲ್ ಪಾವತಿ ಬಾಕಿ ಉಳಿಸಿಕೊಂಡಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

‘ಗ್ರಾಮ ಪಂಚಾಯ್ತಿವಾರು ಗ್ರಾಮ ಪಂಚಾಯ್ತಿ ಅಧ್ಯಕ್ಷರನ್ನು ಸಂಪರ್ಕಿಸಿ ಕೊಳವೆಬಾವಿಗಳ ಲಭ್ಯತೆ, ಅವುಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆಯಬೇಕು. ವಿಫಲವಾದ ಕೊಳವೆ ಬಾವಿಗಳನ್ನು ಕ್ರಮಬದ್ಧವಾಗಿ ಮುಚ್ಚಿಸಲು ಕ್ರಮ ಕೈಗೊಳ್ಳುವ ಮೂಲಕ ಅವಘಡಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಬೇಕು’ ಎಂದು ಸೂಚಿಸಿದರು.

ಮಹಾನಗರ ಪಾಲಿಕೆ ವ್ಯಾಪ್ತಿಯ 15 ವಾರ್ಡ್‌ಗಳಲ್ಲಿ ಅಮೃತ್ ಯೋಜನೆಯಡಿ 24x7 ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದ್ದು, ಈ ಪ್ರದೇಶದಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಇಲ್ಲ. ಈ ಪ್ರದೇಶದಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸುವ ಅಗತ್ಯವಿಲ್ಲ. ಉಳಿದೆಡೆ ನೀರಿನ ಅವಶ್ಯಕತೆ ಇರುವ ಪ್ರದೇಶಗಳಲ್ಲಿ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಕುಡಿಯಲು ಯೋಗ್ಯವಾದ ನೀರನ್ನು ಮಾತ್ರ ಉಪಯೋಗಿಸಬೇಕು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿರುವ ಮೇವು ಬ್ಯಾಂಕ್‌ಗಳಿಂದ ದನಕರುಗಳಿಗಳಲ್ಲದೇ ಕುದುರೆ, ಟಾಂಗಾ ಮಾಲೀಕರಿಗೂ ಮೇವು ಒದಗಿಸಲು ಕ್ರಮ ಕೈಗೊಳ್ಳಬೇಕು. ಬರ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಸೃಷ್ಟಿ ಮಾಡಿ, ಜನರಿಗೆ ಉದ್ಯೋಗ ನೀಡಿ ನೆರವಾಗಬೇಕು. ವೇತನ ಬಾಕಿ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಿಕೊಂಡು ಜನರ ನೆರವಿಗೆ ಧಾವಿಸಬೇಕು’ ಎಂದು ಸೂಚನೆ ನೀಡಿದರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕಾಸ್‌ ಕಿಶೋರ್‌ ಸುರಳಕರ್‌ ಮಾತನಾಡಿ, ‘ಬರಗಾಲದ ಸಂದರ್ಭದಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಹಾಗೂ ಪರಸ್ಪರ ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಜನರಿಗೆ ಅನುಕೂಲ ಮಾಡಿಕೊಡಬೇಕು. ಜಿಪಿಎಸ್ ಡಾಟಾ ಇಲ್ಲದ ಕಡೆ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ವಸ್ತುಸ್ಥಿತಿ ಕುರಿತು ಪರಿಶೀಲನೆ ನಡೆಸಲು ಈಗಾಗಲೇ ಸೂಚಿಸಲಾಗಿದೆ ಎಂದ ಅವರು, ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಖಾಸಗಿ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿ ಕುರಿತು ಇಲಾಖೆಯಿಂದ ಇರುವ ಮಾನದಂಡಗಳು, ನಿಯಮಗಳನ್ನು ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳಲು’ ಸೂಚನೆ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಅಮರೇಶ ನಾಯಕ ಸೇರಿದಂತೆ ಜಿಲ್ಲೆಯ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !