ಹಣ ದುರ್ಬಳಕೆ: ಪಿಡಿಒ ಅಮಾನತು

7

ಹಣ ದುರ್ಬಳಕೆ: ಪಿಡಿಒ ಅಮಾನತು

Published:
Updated:

ಚಾಮರಾಜನಗರ: ಹಣ ದುರುಪಯೋಗ ಮಾಡಿದ ಹಾಗೂ ಕರ್ತವ್ಯಲೋಪ ಎಸಗಿದ ಮೂಲ ಆಲತ್ತೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಡಿ.ಶಿವಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ.ಹರೀಶ್ ಕುಮಾರ್‌ ಆದೇಶ ಹೊರಡಿಸಿದ್ದಾರೆ.

ಶಿವಕುಮಾರ್ ಅವರು ಈ ಹಿಂದೆ ಗುಂಡ್ಲುಪೇಟೆ ತಾಲ್ಲೂಕಿನ ಪಡಗೂರು ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಅವಧಿಯಲ್ಲಿ 14ನೇ ಹಣಕಾಸು ಯೋಜನೆಯಡಿ ವೆಚ್ಚ ಭರಿಸುವ ಸಂದರ್ಭದಲ್ಲಿ ಹಲವು ಗಂಭೀರ ತಪ್ಪುಗಳನ್ನು ಎಸಗಿದ್ದರು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವರದಿ ನೀಡಿದ್ದರು.  

ಅಲ್ಲದೇ, ಯೋಜನೆಗಳಿಗೆ ಸಂಬಂಧಿಸಿದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದು ಮತ್ತು ಕರ್ತವ್ಯಲೋಪ ಎಸಗಿರುವುದು ಕಡತ ಪರಿಶೀಲನೆ ವೇಳೆ ಕಂಡುಬಂದಿದೆ. ಹಾಗಾಗಿ ಪಿಡಿಒ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಎಂದೂ ವರದಿಯಲ್ಲಿ ತಿಳಿಸಿದ್ದರು. 

ಈ ಸಂಬಂಧ ಕಾರಣ ಕೇಳಿ ಶಿವಕುಮಾರ್‌ ಅವರಿಗೆ ನೋಟಿಸ್‌ ನೀಡಲಾಗಿತ್ತು. ಆದರೆ, ಅವರು ನೀಡಿದ್ದ ಸಮಜಾಯಿಷಿ ಸಮರ್ಪಕವಾಗಿರಲಿಲ್ಲ. ಅವರು ಹಣ ದುರ್ಬಳಕೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಹಾಗಾಗಿ ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹರೀಶ್‌ ಕುಮಾರ್‌ ಆದೇಶದಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !