Photos: ಸ್ಮಾರಕ ವೀಕ್ಷಣೆಗೆ ಮುಕ್ತ- ಮೊದಲ ದಿನವೇ ಹಂಪಿಗೆ ಪ್ರವಾಸಿಗರು
ಹೊಸಪೇಟೆ (ವಿಜಯನಗರ): ಕೋವಿಡ್ ಲಾಕ್ ಡೌನ್ ತೆರವಾಗುತ್ತಿದ್ದಂತೆ ಇಲ್ಲಿನ ವಿಶ್ವಪ್ರಸಿದ್ಧ ಹಂಪಿ ಸ್ಮಾರಕಗಳ ವೀಕ್ಷಣೆ ಮೇಲಿದ್ದ ನಿರ್ಬಂಧ ತೆರವುಗೊಳಿಸಿರುವುದರಿಂದ ಪ್ರವಾಸಿಗರು ಹಂಪಿಯತ್ತ ಮುಖ ಮಾಡಿದ್ದಾರೆ.ಎರಡು ತಿಂಗಳ ನಂತರ ಗುರುವಾರ ಹಂಪಿ ಸ್ಮಾರಕಗಳನ್ನು ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸಲಾಗಿದೆ. ಮೊದಲ ದಿನವೇ ವಿವಿಧ ಭಾಗಗಳಿಂದ ಪ್ರವಾಸಿಗರು ಹಂಪಿಗೆ ದೌಡಾಯಿಸಿ, ಬಯಲು ವಸ್ತು ಸಂಗ್ರಹಾಲಯ ಕಣ್ತುಂಬಿಕೊಳ್ಳುತ್ತಿದ್ದಾರೆ.