PHOTOS: ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ: ಹಲವೆಡೆ ಬಿರುಸಿನ ಮತದಾನ
ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ರಾಜ್ಯಾಧ್ಯಕ್ಷ, ಜಿಲ್ಲಾ ಘಟಕಗಳ ಅಧ್ಯಕ್ಷ ಹಾಗೂ ಗಡಿನಾಡು ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ಬೆಳಿಗ್ಗೆ 8 ಗಂಟೆಯಿಂದ ಮತದಾನ ಪ್ರಾರಂಭವಾಗಿದೆ. ಈ ಬಾರಿ 3 ಲಕ್ಷಕ್ಕೂ ಅಧಿಕ ಮಂದಿ ಮತ ಚಲಾಯಿಸಲು ಅರ್ಹರಾಗಿದ್ದಾರೆ. ಮತದಾನ ಮಾಡಿದವರ ಎಡಗೈ ಮಧ್ಯದ ಬೆರಳಿಗೆ ಶಾಹಿ ಹಾಕಲಾಗುತ್ತಿದೆ. ಸಂಜೆ 4 ಗಂಟೆಯವರೆಗೆ ಮತದಾನಕ್ಕೆ ಅವಕಾಶ ಇದೆ. ಬೆಂಗಳೂರು ನಗರ, ಹಾವೇರಿ, ಬೆಳಗಾವಿ ಜಿಲ್ಲೆಗಳಲ್ಲಿ ಮತದಾನ ಬಿರುಸು ಪಡೆದುಕೊಂಡಿದೆ.