Photos | ಉಡುಪಿ ಕೃಷ್ಣನಿಗೆ ಮಹಾಭಿಷೇಕ
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಮಂಗಳವಾರ ವಾರ್ಷಿಕ ಮಹಾಭಿಷೇಕದ ಪ್ರಯುಕ್ತ ಕಡೆಗೋಲು ಕೃಷ್ಣನಿಗೆ 1,108 ಸೀಯಾಳ (ಎಳನೀರು) ಅಭಿಷೇಕ ಹಾಗೂ ವಿಶೇಷ ಪಂಚಾಮೃತ ಅಭಿಷೇಕವನ್ನು ಮಾಡಲಾಯಿತು.ಪರ್ಯಾಯ ಅದಮಾರು ಮಠಾಧೀಶರಾದ ಈಶಪ್ರಿಯ ತೀರ್ಥ ಸ್ವಾಮೀಜಿ, ವಿಶ್ವಪ್ರಿಯ ತೀರ್ಥ ಸ್ವಾಮೀಜಿ, ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥ ಸ್ವಾಮೀಜಿ, ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ, ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪಲಿಮಾರು ಮಠದ ಕಿರಿಯ ವಿದ್ಯಾರಾಜೇಶ್ವರ ತೀರ್ಥ ಸ್ವಾಮೀಜಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.
Published : 30 ಜೂನ್ 2020, 7:23 IST