Photos | ತುಮಕೂರು, ಚಿತ್ರದುರ್ಗದಲ್ಲಿ ಬಂದ್‌ಗೆ ವಿವಿಧ ಸಂಘಟನೆಗಳ ಬೆಂಬಲ
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಮತ್ತು ಎಪಿಎಂಸಿಗೆ ಸಂಬಂಧಿಸಿದಂತೆ ಹೊರಡಿಸಿರುವ ತಿದ್ದುಪಡಿ ಮಸೂದೆಗಳನ್ನು ಖಂಡಿಸಿ ರೈತ, ಕಾರ್ಮಿಕ ಮತ್ತು ದಲಿತ ಸಂಘಟನೆಗಳು ಸೋಮವಾರ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದು ಕಾಂಗ್ರೆಸ್, ಜೆಡಿಎಸ್, ಸಿಪಿಐ (ಎಂ) ಪಕ್ಷಗಳು ಸೇರಿದಂತೆ ಕನ್ನಡಪರ ಹಾಗೂ ವಿವಿಧ ಸಂಘಟನೆಗಳು ರೈತರ ಹೋರಾಟಕ್ಕೆ ಕೈ ಜೋಡಿಸಿವೆ. ರಾಜ್ಯದೆಲ್ಲೆಡೆ ಬಂದ್‌ಗೆ ವಿವಿಧ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತುಮಕೂರು ಮತ್ತು ಚಿತ್ರದುರ್ಗದಲ್ಲಿಕಂಡುಬಂದ ಚಿತ್ರಣವಿದು...ತುಮಕೂರು ನಗರದಲ್ಲೂ ಪ್ರತಿಭಟನೆ ನಡೆದಿದೆ. ಬಸ್ ಸಂಚಾರ ವಿರಳವಾಗಿತ್ತು. ಆಟೊ ಸಂಚಾರ ಕಡಿಮೆ ಇದೆ.ಚಿತ್ರದುರ್ಗದ ಗಾಂಧಿ ವೃತ್ತದಲ್ಲಿ ಕನ್ನಡಪರ ಹಾಗೂ ರೈತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಅಂಗಡಿ ಬಾಗಿಲುಗಳು ಮುಚ್ಚಿವೆ. ಬಸ್ ಸಂಚಾರ ಸ್ಥಗಿತಗೊಂಡಿದೆ.
Published : 28 ಸೆಪ್ಟೆಂಬರ್ 2020, 5:00 IST