ಪಾಕಿಸ್ತಾನ| ಶೌಚಾಲಯವೆಂದು ಭಾವಿಸಿ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದ ಮಹಿಳೆ!

ಶುಕ್ರವಾರ, ಜೂನ್ 21, 2019
24 °C

ಪಾಕಿಸ್ತಾನ| ಶೌಚಾಲಯವೆಂದು ಭಾವಿಸಿ ವಿಮಾನದ ತುರ್ತು ನಿರ್ಗಮನ ದ್ವಾರ ತೆರೆದ ಮಹಿಳೆ!

Published:
Updated:

ಇಸ್ಲಾಮಾಬಾದ್‌: ಪಾಕಿಸ್ತಾನದ ಇಂಟರ್‌ನ್ಯಾಷನಲ್‌ ಏರ್‌ಲೈನ್ಸ್‌ ವಿಮಾನದಲ್ಲಿ (ಪಿಐಎ) ಮಹಿಳಾ ಪ್ರಯಾಣಿಕರೊಬ್ಬರು ತುರ್ತು ನಿರ್ಗಮನ ದ್ವಾರವನ್ನೇ ಶೌಚಾಲಯದ ಬಾಗಿಲು ಎಂದು ತೆರೆದಿದ್ದರಿಂದ ಕೆಲಕಾಲ ಆತಂಕ ಸೃಷ್ಟಿಯಾಯಿತು.   

ಶನಿವಾರ ಈ ವಿಮಾನ ಮ್ಯಾಂಚೆಸ್ಟರ್‌ನಿಂದ ಇಸ್ಲಾಮಾಬಾದ್‌ಗೆ ತೆರಳುತ್ತಿತ್ತು. 

 ‘ಮ್ಯಾಂಚೆಸ್ಟರ್‌ ವಿಮಾನ ನಿಲ್ದಾಣದ ರನ್‌ವೇನಲ್ಲಿದ್ದ ವಿಮಾನ ಹಾರಾಟಕ್ಕೆ ಸಿದ್ಧವಾಗತೊಡಗಿತ್ತು. ಇದೇ ಸಂದರ್ಭದಲ್ಲಿ ಮಹಿಳೆಯೊಬ್ಬರು ತುರ್ತು ನಿರ್ಗಮನದ ಬಾಗಿಲು ತೆರೆದಿದ್ದಾರೆ. ಮಹಿಳೆಯ ಅಚಾತುರ್ಯದಿಂದ ಪಿಕೆ 702 ವಿಮಾನ ಏಳು ಗಂಟೆ ವಿಳಂಬವಾಯಿತು’ ಎಂದು ವಿಮಾನಯಾನ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ. 

ವಿಮಾನಯಾನ ನಿಯಮಗಳ ಅನುಸಾರ ಲಗೇಜ್‌ ಸಮೇತ ಸುಮಾರು 40 ಪ್ರಯಾಣಿಕರನ್ನು ಕೆಳಗಿಳಿಸಲಾಯಿತು. ಹೋಟೆಲ್‌ನಲ್ಲಿ ಇವರಿಗೆ ತಂಗಲು ವ್ಯವಸ್ಥೆ ಮಾಡಲಾಯಿತು. ಬಳಿಕ  ಇನ್ನೊಂದು ವಿಮಾನದಲ್ಲಿ ಕಳುಹಿಸುವ ವ್ಯವಸ್ಥೆ ಮಾಡಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರನ್‌ವೇನಲ್ಲಿ ಇದ್ದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಶೌಚಾಲಯದ ಬಾಗಿಲು ಎಂದು ಭಾವಿಸಿಕೊಂಡು ತುರ್ತು ನಿರ್ಗಮನದ ಬಾಗಿಲು ತೆರೆದೆ’ ಎಂದು ಮಹಿಳೆ ತಿಳಿಸಿದ್ದಾರೆ.

ಈ ಘಟನೆ ಕುರಿತು ತನಿಖೆ ನಡೆಸುವಂತೆ ಪಿಐಎ ಮುಖ್ಯ ಕಾರ್ಯನಿರ್ವಾಹಕ ಅರ್ಷದ್‌ ಮಲ್ಲಿಕ್‌ ಆದೇಶಿಸಿದ್ದಾರೆ. 

ಪಾಕಿಸ್ತಾನದ ಇಂಟರ್‌ನ್ಯಾಷನಲ್‌ ಏರ್‌ಲೈನ್ಸ್‌ ವಿಮಾನ ನಷ್ಟದಲ್ಲಿದೆ. ನಷ್ಟದಿಂದ ಹೊರಬರಲು  ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 6

  Happy
 • 6

  Amused
 • 0

  Sad
 • 2

  Frustrated
 • 3

  Angry

Comments:

0 comments

Write the first review for this !