ಮಹಿಳೆಯರಿಗಾಗಿ ಪಿಂಕ್ ಬಸ್

ಬುಧವಾರ, ಜೂನ್ 19, 2019
22 °C

ಮಹಿಳೆಯರಿಗಾಗಿ ಪಿಂಕ್ ಬಸ್

Published:
Updated:

ಬೆಂಗಳೂರು: ಮಹಿಳಾ ಪ್ರಯಾಣಿಕರಿಗಾಗಿ ವಿಶೇಷ ಪಿಂಕ್‌ ಬಸ್‌ಗಳ ಸಂಚಾರವನ್ನು ನಗರದಲ್ಲಿ ಆರಂಭಿಸಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮುಂದಾಗಿದೆ. ಇದಕ್ಕಾಗಿ ಸಂಸ್ಥೆಯು 47 ಹೊಸ ಬಸ್‌ಗಳನ್ನು ಖರೀದಿಸಲಿದೆ.

ನಿರ್ಭಯಾ ಯೋಜನೆಯಡಿ ₹51 ಕೋಟಿ ಆರ್ಥಿಕ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಬಿಎಂಟಿಸಿ ಪ್ರಸ್ತಾವನೆ ಸಲ್ಲಿಸಿದೆ. ಎ.ಸಿ ವ್ಯವಸ್ಥೆರಹಿತ ಈ ಬಸ್‌ಗಳಲ್ಲಿ ಮಹಿಳೆಯರ ಸಂಚಾರಕ್ಕೆ ಮಾತ್ರ ಅವಕಾಶ ನೀಡಲಾಗುವುದು. ಮಹಿಳಾ ನಿರ್ವಾಹಕರನ್ನೇ ನಿಯೋಜಿಸಲಾಗುವುದು. ಜಿಪಿಎಸ್‌, ಸಿಸಿಟಿವಿ ಕ್ಯಾಮೆರಾ ಮತ್ತು ಪ್ಯಾನಿಕ್ ಬಟನ್‌ಗಳನ್ನು ಈ ಬಸ್‌ಗಳಲ್ಲಿ ಅಳವಡಿಸಲಾಗುತ್ತದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

2006-07ರಲ್ಲಿ ಮಹಿಳೆಯರಿಗಾಗಿ ವಿಶೇಷ ಬಸ್‌ಗಳ ಸೇವೆ ಆರಂಭಸಿದ್ದ ಬಿಎಂಟಿಸಿ, ನಂತರ ಸ್ಥಗಿತಗೊಳಿಸಿತ್ತು. ಇಂತಹ ಬಸ್‌ಗಳಿಗೆ ಮತ್ತೆ ಬೇಡಿಕೆ ಬಂದಿರುವ ಕಾರಣ ಪಿಂಕ್ ಬಸ್ ಸಂಚಾರ ಆರಂಭಿಸಲಾಗುವುದು ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಎನ್.ವಿ. ಪ್ರಸಾದ್ ‘ಪ್ರಜಾವಾಣಿ’ಗೆ ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !