ಇಂದಿನಿಂದ ‘ಪಿಂಕ್‌ ಸಾರಥಿ’ ಸೇವೆ

ಮಂಗಳವಾರ, ಜೂನ್ 25, 2019
26 °C

ಇಂದಿನಿಂದ ‘ಪಿಂಕ್‌ ಸಾರಥಿ’ ಸೇವೆ

Published:
Updated:

ಬೆಂಗಳೂರು: ಮಹಿಳಾ ಪ್ರಯಾಣಿಕರ ಸುರಕ್ಷತೆ ಹಾಗೂ ಭದ್ರತೆಗಾಗಿ ‘ನಿರ್ಭಯಾ’ ಯೋಜನೆಯಡಿಯಲ್ಲಿ ಬಿಎಂಟಿಸಿ ‘ಪಿಂಕ್‌ ಸಾರಥಿ’ ಸೇವೆ ಆರಂಭಿಸಲಿದೆ.

ಇದಕ್ಕಾಗಿ ₹56.7 ಕೋಟಿ ಅನುದಾನ ನೀಡಿದೆ. ಇದರಲ್ಲಿ 25 ಮಹೀಂದ್ರಾ ಬೊಲೆರೊ ವಾಹನಗಳನ್ನು ಖರೀದಿಸಿದ್ದು, ‘ಪಿಂಕ್‌ ಸಾರಥಿ’ ಎಂದು ಹೆಸರಿಡಲಾಗಿದೆ. ಈ ವಾಹನಗಳಲ್ಲಿ ಜಿಪಿಎಸ್‌ ನಿರ್ವಹಣೆ ಹಾಗೂ ಸಾರ್ವಜನಿಕ ಪ್ರಕಟಣೆ ವ್ಯವಸ್ಥೆ ಇದೆ.

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸ್ಮಾರ್ಟ್‌ಕಾರ್ಡ್‌ ಮಾದರಿಯ  ಉಚಿತ ವಿದ್ಯಾರ್ಥಿ ಪಾಸುಗಳನ್ನು ವಿತರಿಸಲಾಗುತ್ತಿದೆ. ಇದರ ಉದ್ಘಾಟನಾ ಕಾರ್ಯಕ್ರಮ ಗುರುವಾರ ಬೆಳಿಗ್ಗೆ 10.45ಕ್ಕೆ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ. ಯೋಜನೆಗಳಿಗೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ.

ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ, ಬಿಎಂಟಿಸಿ ಅಧ್ಯಕ್ಷ ಎನ್‌.ಎ.ಹ್ಯಾರಿಸ್‌, ವ್ಯವಸ್ಥಾಪಕ ನಿರ್ದೇಶಕ ಎನ್‌.ವಿ.ಪ್ರಸಾದ್‌, ನಿರ್ದೇಶಕ ಅನುಪಮ್‌ ಅಗರವಾಲ್‌ ಭಾಗಿಯಾಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 1

    Sad
  • 0

    Frustrated
  • 0

    Angry

Comments:

0 comments

Write the first review for this !