ಸರ್ಕಾರದ ಸಭೆಗಳಲ್ಲಿ ಪ್ಲಾಸ್ಟಿಕ್‌ ನಿಷೇಧ

7

ಸರ್ಕಾರದ ಸಭೆಗಳಲ್ಲಿ ಪ್ಲಾಸ್ಟಿಕ್‌ ನಿಷೇಧ

Published:
Updated:

ಬೆಂಗಳೂರು: ರಾಜ್ಯದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು, ಸರ್ಕಾರಿ ಅನುದಾನಿತ ಸಂಸ್ಥೆಗಳು ಏರ್ಪಡಿಸುವ ಸಭೆ, ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್‌ ಬಾಟಲ್‌ಗಳನ್ನು ಸರಬರಾಜು ಮಾಡುವುದನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಶುದ್ಧ ಕುಡಿಯುವ ನೀರನ್ನು ಗ್ಲಾಸ್‌, ಸ್ಟೀಲ್‌, ಪೇಪರ್‌ ಮತ್ತಿತರ ಪ್ಲಾಸ್ಟಿಕ್‌ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶಿಸಿದೆ.

20 ಲೀಟರ್‌ ಅಥವಾ ಅದಕ್ಕಿಂತ ಹೆಚ್ಚಿನ ಸಾಮರ್ಥ್ಯದ ಕ್ಯಾನ್‌ಗಳಲ್ಲಿ ಶುದ್ದೀಕರಿಸಿದ ಕುಡಿಯುವ ನೀರನ್ನು ವಿತರಣೆ ಮಾಡುವಂತೆ ನಿರ್ದೇಶನ ನೀಡಲಾಗಿದೆ.

 

 

 

 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !