ಇಬ್ಬರ ಕೊಲೆಗೆ ಯತ್ನಿಸಿದ್ದ ರೌಡಿಗೆ ಗುಂಡೇಟು

ಮಂಗಳವಾರ, ಜೂನ್ 18, 2019
29 °C
ಪೊಲೀಸರ ಮೇಲೆಯೇ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದ ಪಚ್ಚೆ

ಇಬ್ಬರ ಕೊಲೆಗೆ ಯತ್ನಿಸಿದ್ದ ರೌಡಿಗೆ ಗುಂಡೇಟು

Published:
Updated:
Prajavani

ಬೆಂಗಳೂರು: ಇಬ್ಬರ ಕೊಲೆಗೆ ಯತ್ನಿಸಿ ಪರಾರಿಯಾಗಿದ್ದ ವಿನೋದ್ ಅಲಿಯಾಸ್ ಪಚ್ಚೆ (24) ಎಂಬಾತನನ್ನು ಅಶೋಕನಗರ ಪೊಲೀಸರು, ಆತನ ಕಾಲಿಗೆ ಗುಂಡು ಹಾರಿಸಿ ಶನಿವಾರ ಸೆರೆ ಹಿಡಿದಿದ್ದಾರೆ.

‘ತನ್ನನ್ನು ಬಂಧಿಸಲು ಹೋಗಿದ್ದ ಪೊಲೀಸರ ಮೇಲೆಯೇ ರೌಡಿ ವಿನೋದ್ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾಗಿದ್ದ. ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಎಸ್‌.ಡಿ. ಶಶಿಧರ್ ರೌಡಿಯ ಕಾಲಿಗೆ ಗುಂಡು ಹಾರಿಸಿದ್ದರು’ ಎಂದು ಕೇಂದ್ರ ವಿಭಾಗದ ಡಿಸಿಪಿ ದೇವರಾಜ್‌ ತಿಳಿಸಿದರು.

‘ವಿನೋದ್‌ನ ಬಲಗಾಲಿಗೆ ಗುಂಡೇಟು ಬಿದ್ದಿದ್ದು, ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ನಂತರ ಆತನನ್ನು ವಶಕ್ಕೆ ಪಡೆಯಲಾಗುವುದು’ ಎಂದು ಹೇಳಿದರು.

ಬೈಕ್‌ ಕದ್ದು ಜೈಲುಪಾಲಾಗಿದ್ದ: ‘ಸಣ್ಣ ವಯಸ್ಸಿನಲ್ಲಿ ಅಪರಾಧ ಕೃತ್ಯ ಎಸಗಲಾರಂಭಿಸಿದ್ದ ವಿನೋದ್, ಬೈಕ್‌ ಕಳ್ಳತನ ಪ್ರಕರಣದಡಿ ಜೈಲಿಗೆ ಹೋಗಿದ್ದ. ಜಾಮೀನು ಮೇಲೆ ಹೊರಬಂದಿದ್ದ ಆತ, ಬೈಕ್ ಕಳವು ಹಾಗೂ ಸುಲಿಗೆ ಮಾಡಲಾರಂಭಿಸಿದ್ದ’ ಎಂದು ಪೊಲೀಸರು ಹೇಳಿದರು.

‘ರಸ್ತೆಯಲ್ಲಿ ಒಬ್ಬಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಸಾರ್ವಜನಿಕರನ್ನು ಬೆದರಿಸಿ ಮೊಬೈಲ್ ಹಾಗೂ ನಗದು ಸುಲಿಗೆ ಮಾಡುತ್ತಿದ್ದ. ಆತನ ವಿರುದ್ಧ ಕೋರಮಂಗಲ, ಭಾರತಿನಗರ ಠಾಣೆಗಳಲ್ಲೂ ಪ್ರಕರಣಗಳು ದಾಖಲಾಗಿವೆ’ ಎಂದು ತಿಳಿಸಿದರು.

ಬಿಯರ್ ಬಾಟಲಿಯಿಂದ ಹೊಡೆದರು: ‘ಪೇಟಿಂಗ್ ಕೆಲಸ ಮಾಡುತ್ತಿದ್ದ ಎನ್‌. ಚಾರ್ಲೆ ಎಂಬುವರು ಆನೇಪಾಳ್ಯದ ನಿವಾಸಿ ಪಿಂಟೊ ಎಂಬುವರ ಮನೆಯ ಬಳಿ ಮೇ 14ರಂದು ಬೆಳಿಗ್ಗೆ 8.30ಕ್ಕೆ ನಿಂತಿದ್ದರು. ಚಾರ್ಲೆ ಅವರನ್ನು ರೌಡಿ ವಿನೋದ್‌ ಹಾಗೂ ಸಹಚರ ನಂದಾ ಗುರಾಯಿಸಿದ್ದರು’ ಎಂದು ಪೊಲೀಸರು ಹೇಳಿದರು.

‘ಏಕೆ ಗುರಾಯಿಸುತ್ತಿದ್ದೀಯಾ?’ ಎಂದು ಚಾರ್ಲೆ ಕೇಳುತ್ತಿದ್ದಂತೆ, ಅವರ ಮೇಲೆಯೇ ಆರೋಪಿಗಳು ಹಲ್ಲೆಗೆ ಮುಂದಾಗಿದ್ದರು. ಚಾಕು ಹಿಡಿದು ಜೀವಬೆದರಿಕೆ ಹಾಕಿದ್ದರು. ರಕ್ಷಣೆಗೆ ಬಂದವರ ತಲೆಗೆ ಬಿಯರ್ ಬಾಟಲಿ ಹಾಗೂ ರಾಡ್‌ನಿಂದ ಹೊಡೆದಿದ್ದರು. ಗಾಯಾಳುಗಳ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅವರಿಬ್ಬರು ನೀಡಿದ ಹೇಳಿಕೆ ಆಧರಿಸಿ ವಿನೋದ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದರು.

‘ಬನ್ನೇರುಘಟ್ಟ ರಸ್ತೆಯ ಕ್ರೈಸ್ತರ ಸ್ಮಶಾನದಲ್ಲಿ ರೌಡಿ ವಿನೋದ್ ಅವಿತಿದ್ದ. ಮಾಹಿತಿ ಬರುತ್ತಿದ್ದಂತೆ ಸ್ಥಳಕ್ಕೆ ಹೋಗಿದ್ದ ಇನ್‌ಸ್ಪೆಕ್ಟರ್ ಶಶಿಧರ್ ಶರಣಾಗುವಂತೆ ಆರೋಪಿಗೆ ಹೇಳಿದ್ದರು. ಅದಕ್ಕೆ ಒಪ್ಪದ ಆತ, ಪೊಲೀಸರ ಮೇಲೆಯೇ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾಗಿದ್ದ’ ಎಂದು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !