ಬುಧವಾರ, ನವೆಂಬರ್ 13, 2019
23 °C
ಹೈಕೋರ್ಟ್‌ಗೆ ರಾಜ್ಯ ಸರ್ಕಾರದ ಮಾಹಿತಿ

ಪೊಲೀಸ್‌ ಇಲಾಖೆ: 4 ಹಂತಗಳಲ್ಲಿ ನೇಮಕಾತಿ

Published:
Updated:

ಬೆಂಗಳೂರು: ‘ರಾಜ್ಯದಲ್ಲಿ ಖಾಲಿ ಇರುವ ಸಬ್ ಇನ್‌ಸ್ಪೆಕ್ಟರ್ ಹಾಗೂ ಪೊಲೀಸ್‌ ಕಾನ್‌ಸ್ಟೆಬಲ್‌ ಶ್ರೇಣಿಯ 16,838 ಹುದ್ದೆಗಳನ್ನು 2022ರ ಮಾರ್ಚ್ ವೇಳೆಗೆ ನಾಲ್ಕು ಹಂತಗಳಲ್ಲಿ ಭರ್ತಿ ಮಾಡಲಾಗುವುದು’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‍ಗೆ ತಿಳಿಸಿದೆ.

ಈ ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಂ.ನವಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲ ಬಿ.ಪಿ. ಕೃಷ್ಣ, ಈ ಕುರಿತ ವೇಳಾಪಟ್ಟಿಯನ್ನು ನ್ಯಾಯಪೀಠಕ್ಕೆ ಪ್ರಮಾಣ ಪತ್ರದ ಮೂಲಕ ಸಲ್ಲಿಸಿದರು.

‘ಮೊದಲ ಹಂತದಲ್ಲಿ 300 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಈ ನೇಮಕಾತಿ ಪ್ರಕ್ರಿಯೆ 2019ರ ಡಿಸೆಂಬರ್ ವೇಳೆಗೆ ಪೂರ್ಣಗೊಳ್ಳಲಿದೆ’ ಎಂದು ತಿಳಿಸಿದರು. ವಿಚಾರಣೆಯನ್ನು ಅಕ್ಟೋಬರ್‌ 9ಕ್ಕೆ ಮುಂದೂಡಲಾಗಿದೆ.

ಪ್ರತಿಕ್ರಿಯಿಸಿ (+)