ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಕಾರ್ಯಾಚರಣೆ ಮೇಲೆ ಪರಿಣಾಮ ಬೀರಲ್ಲ: ಸೇನೆ

7

ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತ ಕಾರ್ಯಾಚರಣೆ ಮೇಲೆ ಪರಿಣಾಮ ಬೀರಲ್ಲ: ಸೇನೆ

Published:
Updated:

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಜಾರಿಯಾಗಿರುವ ರಾಜ್ಯಪಾಲರ ಆಡಳಿತ ಉಗ್ರರ ವಿರುದ್ಧದ ಸೇನಾ ಕಾರ್ಯಾಚರಣೆ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರುವುದಿಲ್ಲ ಎಂದು ಭಾರತೀಯ ಸೇನೆ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಬುಧವಾರ ಸ್ಪಷ್ಟಪಡಿಸಿದ್ದಾರೆ.  

ಕಣಿವೆ ರಾಜ್ಯದಲ್ಲಿ ಇಂದಿನಿಂದ ರಾಜ್ಯಪಾಲರ ಆಡಳಿತ ಜಾರಿ ಮಾಡಲು ರಾಷ್ಟ್ರಪತಿ ರಾಮನಾಥ ಕೊವಿಂದ್‌ ಅವರು ಒಪ್ಪಿಗೆ ಸೂಚಿಸಿದ ಬಳಿಕ ರಾವತ್‌ ಈ ಪ್ರತಿಕ್ರಿಯೆ ನೀಡಿದ್ದಾರೆ. 

 ‘ರಂಜಾನ್ ತಿಂಗಳಲ್ಲಿ ಮಾತ್ರ ನಾವು ಕಾರ್ಯಾಚರಣೆ ನಿಲ್ಲಿಸಿದ್ದೆವು. ಅದರ ಪರಿಣಾಮವನ್ನೂ ನಾವು ಕಂಡೆವು. ರಾಜ್ಯಪಾಲರ ಆಡಳಿತ ಸೇನಾ ಕಾರ್ಯಾಚರಣೆ ಮೇಲೆ ಪರಿಣಾಮ ಬೀರುವುದಿಲ್ಲ. ಈ ಹಿಂದಿನಂತೆ ನಮ್ಮ ಮಿಲಿಟರಿ ಕಾರ್ಯಾಚರಣೆ ಮುಂದುವರಿಯಲಿದೆ.  ರಾಜಕೀಯದ ಯಾವುದೇ ಹಸ್ತಕ್ಷೇಪವನ್ನು ನಾವು ಎದುರಿಸುತ್ತಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ. 

 ರಾಷ್ಟ್ರಪತಿಯಿಂದ ಅನುಮತಿ ಸಿಕ್ಕ ಬಳಿಕ, ಜಮ್ಮು ಮತ್ತು ಕಾಶ್ಮೀರ ಸಂವಿಧಾನದ 92ನೇ ವಿಧಿಯನ್ವಯ ರಾಜ್ಯಪಾಲರ ಆಳ್ವಿಕೆ ಜಾರಿ ಮಾಡಲು ರಾಜ್ಯಪಾಲರಾದ ಎನ್‌.ಎನ್‌.ವೊಹ್ರಾ ಬುಧವಾರ ಸೂಚನೆ ಹೊರಡಿಸಿದ್ದಾರೆ. 

ಪಿಡಿಪಿ–ಬಿಜೆಪಿ ಮೈತ್ರಿ ಸರ್ಕಾರದಿಂದ ಬಿಜೆಪಿ ಮಂಗಳವಾರ ತನ್ನ ಬೆಂಬಲವನ್ನು ವಾಪಸ್ಸು ಪಡೆದಿದ್ದರಿಂದ ಮುಖ್ಯಮಂತ್ರಿಯಾಗಿದ್ದ ಮೆಹಬೂಬಾ ಮುಫ್ತಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಬರಹ ಇಷ್ಟವಾಯಿತೆ?

 • 8

  Happy
 • 1

  Amused
 • 0

  Sad
 • 2

  Frustrated
 • 1

  Angry

Comments:

0 comments

Write the first review for this !