4

ರಮ್ಜಾನ್‌ ಸಮಯದಲ್ಲೂ ಉಗ್ರರ ಚಟುವಟಿಕೆ: ರಾವತ್‌

Published:
Updated:

ನವದೆಹಲಿ: ‘ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ರಮ್ಜಾನ್‌ ಸಂದರ್ಭದಲ್ಲಿಯೂ ವಿಧ್ವಂಸಕ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದರಿಂದ ಕದನವಿರಾಮ ಸ್ಥಗಿತಗೊಳಿಸುವುದು ಅನಿವಾರ್ಯವಾಯಿತು’ ಎಂದು ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಸಮರ್ಥಿಸಿಕೊಂಡಿದ್ದಾರೆ.

‘ಸದ್ಯ ನಡೆಯುತ್ತಿರುವ ಸೇನಾ ಕಾರ್ಯಾಚರಣೆ ಮೇಲೆ ರಾಜ್ಯಪಾಲರ ಆಡಳಿತ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ. ಈ ಮೊದಲಿನಂತೆಯೇ ಕಾರ್ಯಾಚರಣೆ ನಡೆಯಲಿದೆ. ಇದರಲ್ಲಿ ರಾಜಕೀಯ ಹಸ್ತಕ್ಷೇಪ ಇಲ್ಲ’ ಎಂದು ತಿಳಿಸಿದರು.

’ಯಾವುದೇ ಸಮಸ್ಯೆ ಇಲ್ಲದೆ ನಾಗರಿಕರು ರಮ್ಜಾನ್‌ ಸಂದರ್ಭದಲ್ಲಿ ಪ್ರಾರ್ಥನೆ ಸಲ್ಲಿಸಬೇಕು ಎನ್ನುವುದು ನಮ್ಮ ಆಶಯವಾಗಿತ್ತು. ಆದರೆ, ಉಗ್ರರು ತಮ್ಮ ಚಟುವಟಿಕೆಗಳನ್ನು ಮುಂದುವರಿಸಿದರು’ ಎಂದು ರಾವತ್‌ ತಿಳಿಸಿದರು.

‘ಭದ್ರತಾ ಪಡೆಗಳಿಗೆ ಕಠಿಣವಾದ ನಿಯಮಗಳಿವೆ. ಈ ನಿಯಮಗಳ ಅನುಸಾರವೇ ಕಾರ್ಯನಿರ್ವಹಿಸಬೇಕಾಗುತ್ತದೆ. ಆದರೆ, ಯಾವುದೇ ರೀತಿಯ ನಿರ್ಬಂಧಗಳನ್ನು ವಿಧಿಸಿಲ್ಲ’ ಎಂದು ಸ್ಪಷ್ಟಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !