ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣ: ಬೆಂಗಳೂರು ಉತ್ತರ ವಿವಿ

7

ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳಿಗೆ ಉಚಿತ ಶಿಕ್ಷಣ: ಬೆಂಗಳೂರು ಉತ್ತರ ವಿವಿ

Published:
Updated:
ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಕೆಂಪರಾಜು ಮಾಹಿತಿ ನೀಡಿದರು

ಬೆಂಗಳೂರು: ಕೃಷಿ ಸಾಲದಿಂದ ಆತ್ಮಹತ್ಯೆ ಮಾಡಿಕೊಂಡ ರೈತರ ಮಕ್ಕಳು ಹಾಗೂ ವೀರ ಮರಣ ಹೊಂದಿದ ಸೈನಿಕರ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಘೋಷಿಸಿದೆ.

ಗುರುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ವಿಶ್ವವಿದ್ಯಾಲಯದ ಸಾಮಾಜಿಕ ಹೊಣೆಗಾರಿಕೆ ನಿಧಿ (ಸಿಎಸ್‌ಆರ್‌) ಅಡಿ ಈ ಕೆಲಸ ಮಾಡಲಾಗುವುದು’ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕುಲಪತಿ ಟಿ.ಡಿ.ಕೆಂಪರಾಜು ತಿಳಿಸಿದರು.

₹100 ಕೋಟಿ ಅನುದಾನಕ್ಕೆ ಬೇಡಿಕೆ: ‘ನೂತನ ಕ್ಯಾಂಪಸ್‌ ನಿರ್ಮಾಣ ಮಾಡಲು ಸರ್ಕಾರ ಮಂಜೂರು ಮಾಡಿದ್ದ ಜಮೀನು ಈಗಾಗಲೇ ವಿಶ್ವವಿದ್ಯಾಲಯಕ್ಕೆ ವರ್ಗಾವಣೆಯಾಗಿದೆ. ಆಡಳಿತಾತ್ಮಕ ಕಟ್ಟಡ, ಗ್ರಂಥಾಲಯ, ಶೈಕ್ಷಣಿಕ ಕಟ್ಟಡ, ವಿದ್ಯಾರ್ಥಿ ನಿಲಯಗಳನ್ನು ನಿರ್ಮಿಸಲು ₹100 ಕೋಟಿ ಅನುದಾನಕ್ಕೆ ಪ್ರಸ್ತಾವ ಸಲ್ಲಿಸಲು ನಿರ್ಧರಿಸಿದ್ದೇವೆ. ಇದೇ ಬಜೆಟ್‌ನಲ್ಲಿ ಅನುದಾನ ದೊರೆತರೆ, ಇನ್ನೊಂದು ವರ್ಷದಲ್ಲಿ ಕ್ಯಾಂಪಸ್‌ ಸಿದ್ಧವಾಗಲಿದೆ’ ಎಂದು ವಿವರಿಸಿದರು.

ಹೊಸ ಕೋರ್ಸ್‌ ಪ್ರಾರಂಭ: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಹೊಸದಾಗಿ 8 ಸ್ನಾತಕೋತ್ತರ ಕೋರ್ಸ್‌ಗಳನ್ನು ಪ್ರಾರಂಭಿಸಲು ಅನುಮತಿ ದೊರೆತಿದೆ. ಜೊತೆಗೆ ಬಿಬಿಎಂ ವಿಮಾನಯಾನ, ಅನಿಮೇಷನ್‌ ಮತ್ತು ಮಲ್ಟಿಮೀಡಿಯಾ, ಒಳಾಂಗಣ ವಿನ್ಯಾಸ, ತರ್ಕಶಾಸ್ತ್ರ ಪದವಿ ಕೋರ್ಸ್‌ಗಳನ್ನು ಪರಿಚಯಿಸುತ್ತಿದ್ದೇವೆ ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 1

  Happy
 • 1

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !