7
ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರತೆ

ಕರ್ನಾಟಕದಲ್ಲಿ ಸರ್ಕಾರಿ ವೈದ್ಯರಿಗೆ ಬರ!

Published:
Updated:

ನವದೆಹಲಿ: ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಎದುರಿಸುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕ ಕೂಡ ಒಂದಾಗಿದೆ.

ಕರ್ನಾಟಕದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನೋಂದಾಯಿತ ವೈದ್ಯರು ಇದ್ದರೂ ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರತೆ ಕಾಡುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿ ಹೇಳಿದೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳ ಸಂಖ್ಯೆಗೆ ಹೋಲಿಸಿದಾಗ ವೈದ್ಯರ ಸಂಖ್ಯೆ ತುಂಬಾ ಕಡಿಮೆ ಇದೆ. ವೈದ್ಯರ ಲಭ್ಯತೆ ಪರಿಗಣಿಸಿದಾಗ ರಾಜ್ಯದ ಸ್ಥಿತಿ ಉತ್ತಮವಾಗಿಲ್ಲ.

ಸರಾಸರಿ 13,556 ರೋಗಿಗಳಿಗೆ ಒಬ್ಬ ವೈದ್ಯರಿದ್ದಾರೆ. ಇದು ರಾಷ್ಟ್ರೀಯ ವೈದ್ಯ–ರೋಗಿಗಳ ಸರಾಸರಿಗಿಂತ (11,082:1) ಹೆಚ್ಚು ಎಂದು ವರದಿ ಆತಂಕ ವ್ಯಕ್ತಪಡಿಸಿದೆ.

‘ದಕ್ಷಿಣ ಭಾರತದ ರಾಜ್ಯಗಳಿಗೆ ಹೋಲಿಸಿದಾಗ ಕರ್ನಾಟಕದಲ್ಲಿ ವೈದ್ಯ ಮತ್ತು ರೋಗಿಗಳ ಸರಾಸರಿ ಪ್ರಮಾಣ ಅತ್ಯಂತ ಶೋಚನೀಯವಾಗಿದೆ’ ಎಂದು ರಾಷ್ಟ್ರೀಯ ಆರೋಗ್ಯ ವರದಿಯಲ್ಲಿ ಹೇಳಲಾಗಿದೆ.

ಕರ್ನಾಟಕದ ಆರು ಕೋಟಿ ಜನಸಂಖ್ಯೆಗೆ 80 ಸಾವಿರ ವೈದ್ಯರು ಸಾಕು. ಆದರೆ, ಹೆಚ್ಚಿನ ವೈದ್ಯರು ಸರ್ಕಾರಿ ವೈದ್ಯ ವೃತ್ತಿಯ ಬದಲು ಖಾಸಗಿ ವೃತ್ತಿ ಆಯ್ಕೆ ಮಾಡಿಕೊಳ್ಳುತ್ತಿ
ರುವುದು ಸಮಸ್ಯೆಗೆ ಕಾರಣ ಎಂದು ಹೇಳಲಾಗಿದೆ.

ರಾಜ್ಯದಲ್ಲಿ ಕಳೆದ ಒಂದು ವರ್ಷದಲ್ಲಿ ಈ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿದೆ. ಬಿಹಾರ, ಉತ್ತರ ಪ್ರದೇಶ, ಜಾರ್ಖಂಡ್‌, ಮಧ್ಯ ಪ್ರದೇಶ, ಮಹಾರಾಷ್ಟ್ರ ಮತ್ತು ಛತ್ತೀಸಗಡದಲ್ಲಿ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ.

ಬರಹ ಇಷ್ಟವಾಯಿತೆ?

 • 6

  Happy
 • 1

  Amused
 • 1

  Sad
 • 0

  Frustrated
 • 1

  Angry

Comments:

0 comments

Write the first review for this !